Basanagowda patil yatnal
ಇತ್ತೀಚೆಗಷ್ಟೇ ಸಿಎಂ ಯಡಿಯೂರಪ್ಪನವರು ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿರುವುದಿಲ್ಲ ಎಂದು ಹೇಳಿ ಸಂಚಲನ ಸೃಷ್ಟಿಸಿದ್ದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರು ಇದೀಗ ತಮ್ಮ ಚಾಳಿ ಮುಂದುವರೆಸಿದ್ದಾರೆ. ಟ್ವೀಟ್ ಮೂಲಕ ಮತ್ತೆ ವಾಗ್ದಾಳಿ ಮುಂದುವರೆಸಿರುವ ಯತ್ನಾಳ ಸಚಿವನಾಗುವುದಕ್ಕೆ ಯಾರದ್ದೋ ಕಾಳು, ತಲೆ ಹಿಡಿಯುವ ಕೆಲಸ ಮಾಡಿಲ್ಲ ಎಂದುಉ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಮತ್ತೆ ಕಿಡಿಕಾರಿದ್ದಾರೆ. ” ಕರ್ನಾಟಕದ ಅಭಿವೃದ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಿಂದ ಜನಪ್ರತಿನಿಧಿಯಾಗಿ ಕೆಲಸ ಮಾಡುತ್ತಿದ್ದೆನೆ ಹೊರತು ಸಚಿವನಾಗುವದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ ಅದು ನನ್ನ ಜಾಯಮಾನ ಅಲ್ಲ ” ಎಂದು ಆಕ್ರೋಶ ಹೊರಹಾಕಿದ್ದಾರೆ.
ಅಲ್ಲದೇ ಇಂದು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಸಿಎಂ ಬಿಎಸ್ವೈ ವಿರುದ್ಧದ ತಮ್ಮ ಆಕ್ರೋಶವನ್ನು ಮುಂದುವರೆಸಿದ್ದಾರೆ. ಫೇಸ್‌ಬುಕ್ ಮೂಲಕ ಯತ್ನಾಳ್ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ಪುತ್ರ ವ್ಯಾಮೋಹದ ಬಗ್ಗೆ ಟಾಂಗ್ ನೀಡಿದ್ದಾರೆ. ಯತ್ನಾಳ್ ಅವರ ಶಿಷ್ಯ ರಾಘವ ಅಣ್ಣಿಗೇರಿ ಮತ್ತು ಇತರರು ಮಾಡಿರುವ ಫೇಸ್ ಬುಕ್ ಪೋಸ್ಟ್ ಗಳನ್ನು ಯತ್ನಾಳ ಹೆಸರಿನಲ್ಲಿರುವ ಫೇಸ್‌ಬುಕ್ ಪೇಜ್ ನಲ್ಲಿ ಶೇರ್ ಮಾಡಲಾಗಿರುವುದು ಇದೀಗ ವ್ಯಾಪಕ ಚರ್ಚೆಗೆ ಗುರಿಯಾಗಿದೆ.

“ವಿಜಯೇಂದ್ರ ಒಬ್ಬನೇ ಎಲ್ಲ ಚುನಾವಣೆಗಳನ್ನು ಗೆಲ್ಲಿಸುವುದಾದರೆ ವಿಜಯೇಂದ್ರ ನೇತೃತ್ವದಲ್ಲಿ ಎರಡೂ ಕ್ಷೇತ್ರ ಗೆಲ್ಲುತ್ತೇವೆ” ಎಂದು ಯಡಿಯೂರಪ್ಪ ಹೇಳಿಕೆ ನೀಡಿರುವ ಪತ್ರಿಕಾ ವರದಿಯನ್ನು ಈ ಪೋಸ್ಟ್ ಗೆ ಟ್ಯಾಗ್ ಮಾಡಿದ್ದಾರೆ. ಈ ವರದಿಯಲ್ಲಿ ಬೈ ಎಲೆಕ್ಷನ್ ನಲ್ಲಿ ಎರಡೂ ಕ್ಷೇತ್ರಗಳನ್ನು ವಿಜಯೇಂದ್ರ ನೇತೃತ್ವದಲ್ಲಿ ಗೆಲ್ಲತ್ತೇವೆ ಎಂದು ಯಡಿಯೂರಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಲಾಗಿದೆ. ಈ ಹಿನ್ನೆಲೆ ಯತ್ನಾಳ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಸುಧಾರಣಾ ಪರ್ವ ಆರಂಭವಾಗಿದೆ: ಸಿ ಟಿ ರವಿ
ಇದೇ ವೇಳೆ ಯಡಿಯೂರಪ್ಪ ಅವರ ಕಾಲೆಳೆದಿರುವ ಯತ್ನಾಳ್, “ಕರ್ನಾಟಕದ ಅಭಿವೃಧ್ಧಿ ಹಾಗೂ ಜನರ ಧ್ವನಿಯಾಗಿ ಆತ್ಮಸಾಕ್ಷಿಯಾಗಿ ಜನಪ್ರತಿನಿಧಿಯಾಗಿ ಕೆಲ ಮಾಡುತ್ತಿದ್ದೇನೆ ಹೊರತು ಸಚಿವನಾಗುವುದಕ್ಕೆ ಯಾರದೋ ಕಾಲು ಹಿಡಿದು ತಲೆ ಹಿಡಿಯುವ ಕೆಲಸ ಮಾಡಿಲ್ಲ. ಅದು ನನ್ನ ಜಾಯಮಾನ ಅಲ್ಲ” ಎಂದು ಪರೋಕ್ಷವಾಗಿ ಶಾಸಕ ರೇಣುಕಾಚಾರ್ಯ ಮತ್ತು ಆರ್ ಅಶೋಕ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Basanagowda patil yatnal
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel