ವಿಜಯಪುರ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಹೋರಾಟ ನಡೆಸಿತ್ತಿರುವ ಕೂಡಲಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಹರಿಹರ ಪಂಚಮಸಾಲಿ ಪೀಠದ ಶ್ರೀಗಳ ನಡುವೆ ಸಮನ್ವಯತೆ ಕೊರತೆ ಹೆಚ್ಚಿದ್ದಂತೆ ಕಾಣುತ್ತಿದೆ.
ಈ ವಿಚಾರಾಗಿ ವಿಜಯಪುರದಲ್ಲಿ ಮಾತನಾಡಿದ ಪಂಚಮಸಾಲಿ ಸಮುದಾಯದವರೇ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕೂಡಲಸಂಗಮ ಹಾಗೂ ಹರಿಹರ ಪಂಚಮಸಾಲಿ ಸ್ವಾಮೀಜಿ ಒಟ್ಟಾಗಿ ಕೆಲಸ ಮಾಡಿದ್ರೆ ಒಳ್ಳೆಯದು. ಇಬ್ಬರು ಕೂಡಿ ಸಮಾಜದ ಹಿತದೃಷ್ಟಿಯಿಂದ ಕೆಲಸ ಮಾಡಲಿ. ಯಾರಾದ್ರು ಅನುದಾನ ಕೊಡ್ತಾರೆ ಅಂತಾ ಅವರ ಪರವಾಗಿ ಮಾತಾಡೋದು ಬಿಡಲಿ ಎಂದು ಸಲಹೆ ನೀಡಿದ್ದಾರೆ.
ಅವರನ್ನ ಮಂತ್ರಿ ಮಾಡಿ, ಇವರನ್ನ ಮಂತ್ರಿ ಮಾಡಿ ಅಂತ ಲಾಬಿ ಮಾಡಬೇಡಿ. ಸಮುದಾಯದ ಕಡೆ ಕೆಲಸ ಮಾಡುವುದನ್ನ ಬಿಟ್ಟು ರಾಜಕೀಯದಲ್ಲಿ ಭಾಗಿಯಾಗುವುದು ಬೇಡ. ತಲೆತಿರುಕ ಹೇಳಿಕೆಗಳನ್ನ ಬಿಟ್ಟು ಸಮಾಜಕ್ಕಾಗಿ ಕೆಲಸ ಮಾಡಲಿ ಎಂದು ಯತ್ನಾಳ್ ಹರಿಹರ ಪೀಠದ ಪಂಚಮಸಾಲಿ ಸ್ವಾಮೀಜಿಗೆ ಟಾಂಗ್ ನೀಡಿದ್ದಾರೆ.
ಕೋಮು ಗಲಭೆ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ
ರಾಜ್ಯದಲ್ಲಿ ಕೋಮುಗಲಭೆ ನಿಯಂತ್ರಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೇ ಎಂದು ಸ್ವಪಕ್ಷದ ಸರ್ಕಾರದ ವಿರುದ್ಧವೇ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಬೆಂಗಳೂರು ದುಷ್ಕರ್ಮಿಗಳ ಪಾಲಿಗೆ ಹಾಟ್ ಸ್ಪಾಟ್ ಆಗುತ್ತಿದೆ. ರಾಮಮಂದಿರ ಕಟ್ಟಡದ ಹಣ ಸಂಗ್ರಹದ ವಾಹನದ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಸಿಎಂ, ಗೃಹಮಂತ್ರಿ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಶಿವಮೊಗ್ಗದ ಕಲ್ಲುಕ್ವಾರಿಯಲ್ಲಿ ನಡೆದ ಸ್ಫೋಟದ ತನಿಖೆಯನ್ನು ಸಿಬಿಐಗೆ ಕೊಡಬೇಕಿತ್ತು. ಎಲ್ಲ ರಾಜಕೀಯ ವ್ಯಕ್ತಿಗಳ ಗಣಿಗಾರಿಕೆ ಇದೆ. ಪೊಲೀಸ್ ತನಿಖೆಯಿಂದ ಏನೂ ಅಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ವಿಧಾನಪರಿಷತ್‍ನಲ್ಲಿ ನೀಲಿ ಚಿತ್ರ ವೀಕ್ಷಣೆ ಬಗ್ಗೆ ನಾನು ಮಾತನಾಡುವುದಿಲ್ಲ. ವಿಧಾನಸಭೆ ಹೊರಗಡೆ ನಮಗೆ ಮೊಬೈಲ್ ಹೊರಗಡೆ ಇಡಲು ಬಾಕ್ಸ್ ಮಾಡಿದ್ದಾರೆ. ನಾವೆಲ್ಲ ಅಲ್ಲೆ ಇಟ್ಟು ಹೋಗುತ್ತೇವೆ. ಇದರ ಬಗ್ಗೆ ಸೂಕ್ತ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು. ಇದನ್ನ ಗಂಭೀರವಾಗಿ ತಗೆದುಕೊಳ್ಳ ಬೇಕು ಎಂದು ಸಲಹೆ ನೀಡಿದರು.
ಉದ್ಧವ್ ಠಾಕ್ರೆ ವಿರುದ್ದ ಯತ್ನಾಳ್ ಕಿಡಿ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಮಾಡಲು ಬೇರೆ ಕೆಲಸ ಇಲ್ಲ. ಮಹಾರಾಷ್ಟ್ರದ ಛತ್ತ ಸೇರಿದಂತೆ ಇನ್ನು ಅನೇಕ ಹಳ್ಳಿಗಳು ಬೆಳಗಾವಿಗೆ ಸೇರಬೇಕು. ಉಪದ್ಯಾಪಿ ಠಾಕ್ರೆ ಹತಾಶಯರಾಗಿ ಈ ಕೆಲಸ ಮಾಡುತ್ತಿದ್ದಾರೆ. ಇದರಿಂದ ಮತ್ತೆ ಅಧಿಕಾರ ಹಿಡಿಯಲು ಪ್ರಯತ್ನಿಸುತ್ತಿದ್ದಾರೆ ಎಂದು ಯತ್ನಾಳ್ ಆರೋಪಿಸಿದ್ದಾರೆ.
ಎಚ್ಡಿಕೆ-ನಾನು ಸ್ನೇಹಿತರು
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಾಗೂ ನಾನು ಸ್ನೇಹಿತರು. ಹೆಚ್‍ಡಿಕೆ ಜತೆ ಭೇಟಿಯಲ್ಲಿ ವಿಶೇಷ ಇಲ್ಲ. ಜೆಡಿಎಸ್‍ನಿಂದ ನಿಮ್ಮನ್ನ ಬಿಟ್ಟುಕೊಟ್ಟು ನಾವು ತಪ್ಪು ಮಾಡಿದೆವು. ಕರ್ನಾಟಕದಲ್ಲಿ ನಿಜವಾದ ವಿರೋಧ ಪಕ್ಷದ ನಾಯಕ ಅಂದ್ರೆ ನೀವೆ ಎಂದು ಕುಮಾರಸ್ವಾಮಿ ಹೇಳಿದರು. ಇನ್ನು ಮುಂದೆ ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಎಲ್ಲೂ ಹೋಗಲ್ಲ ಎಂದು ಯತ್ನಾಳ್ ಸ್ಪಷ್ಟಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel