ಆಡಳಿತ ಪಕ್ಷದ ಶಾಸಕರಿಂದಲೇ ಸರ್ಕಾರಕ್ಕೆ ಸಂಕಟ
ಬೆಂಗಳೂರು : ಮೀಸಲಾತಿ ವಿಚಾರವಾಗಿ ಆಡಳಿತ ಪಕ್ಷದ ಶಾಸಕರೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನ ಇಕ್ಕಟ್ಟಿಗೆ ಸಿಲುಕಿಸಿದ್ದಾರೆ.
ವಿಧಾನಸಭೆಯಲ್ಲಿ ಇಂದು ಬಿಜೆಪಿ ಶಾಸಕರೇ ಮೀಸಲಾತಿ ಕಹಳೆ ಮೊಳಗಿಸಿದರು.
ಪಂಚಮಸಾಲಿ ಮೀಸಲಾತಿಗಾಗಿ ಶಾಸಕರಾದ ಯತ್ನಾಳ್, ಅರವಿಂದ್ ಬೆಲ್ಲದ್ ಬಾವಿಗಿಳಿದ್ರೆ, ಎಸ್ ಟಿ ಮೀಸಲಾತಿಗಾಗಿ ರಾಜೂಗೌಡ. ಯಾದವ-ಕಾಡುಗೊಲ್ಲ ಮೀಸಲಾತಿ ವಿಚಾರವಾಗಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಧ್ವನಿ ಎತ್ತಿದ್ರು.
ಅಲ್ಲದೇ ಮೀಸಲಾತಿ ವಿಚಾರವಾಗಿ ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಡಬೇಕೆಂದು ಶಾಸಕರು ಆಗ್ರಹಿಸಿದರು.
ಆಗ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿ, ಸಿಎಂ ಉತ್ತರ ಕೊಡಬೇಕು ಅಂತಿದ್ದಾರೆ. ಸಿ.ಸಿ.ಪಾಟೀಲ್ ಉತ್ತರ ಕೊಡಲು ಸಿದ್ಧರಿದ್ದಾರೆ.
ಸಿಎಂ ಉತ್ತರ ಕೊಡಬೇಕು ಅಂದ್ರೆ ಅವರು ಬರುವ ತನಕ ಕಾಯಬೇಕು. ಹೀಗೆ ಧರಣಿ ಮಾಡಿ ಸದನದ ಸಮಯ ವ್ಯರ್ಥ ಮಾಡಬೇಡಿ ಎಂದು ಸಲಹೆ ಕೊಟ್ಟರು.
ಬಳಿಕ ಸ್ಪೀಕರ್ ಸೂಚನೆ ಮೇರೆಗೆ ಮೂವರು ಶಾಸಕರು ಧರಣಿ ವಾಪಸ್ ಪಡೆದರು.
ಇದೇ ವೇಳೆ ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ ವಿಚಾರವಾಗಿ ರಾಜೂಗೌಡ ಸದನದಲ್ಲಿ ಅಸಮಾಧಾನ ಹೊರಹಾಕಿದ್ರು.
ಅದೇ ರೀತಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಡುಗೊಲ್ಲ ಮೀಸಲಾತಿ ಸಂಬಂಧ ಚರ್ಚೆಗೆ ನಮಗೂ ಅವಕಾಶ ಕೊಡಿ ಅಂತಾ ಆಗ್ರಹಿಸಿದರು.
ಒಟ್ಟಾರೆ ಬಿಜೆಪಿ ಶಾಸಕರೇ ಮೀಸಲಾತಿ ವಿಚಾರವಾಗಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದ್ದು, ಸಿಎಂ ಉತ್ತರ ಏನಿರುತ್ತೆ ಅಂತ ಕಾಡುನೋಡಬೇಕು.









