ಬಸವನಗೌಡ ಬಿಜೆಪಿಗೆ ಚೂರಿ ಹಾಕಿ ಕಾಂಗ್ರೆಸ್ ಸೇರಿದ್ದಾರೆ : ರವಿಕುಮಾರ್
ರಾಯಚೂರು : ಆರ್. ಬಸವನಗೌಡ ತುರುವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಆದ್ರೆ ಆರ್. ಬಸವನಗೌಡ ತುರುವಿಹಾಳರನ್ನ ಬಿಜೆಪಿ ಪರಿಚಯಸಿದ್ದು, ಬಿಜೆಪಿ ಬೆನ್ನಿಗೆ ಚೂರಿಹಾಕಿ ಕಾಂಗ್ರೆಸ್ ಸೇರಿದ್ದಾರೆ.
ಮುಂಬರುವ ದಿನಗಳಲ್ಲಿ ಮತದಾರ ಅವರಿಗೆ ತಕ್ಕ ಪಾಠವನ್ನ ಕಲಿಸುತ್ತಾನೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿ ಕುಮಾರ್ ಹೇಳೀದ್ದಾರೆ.
ಮಸ್ಕಿ ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಬ್ಬರು ರಾಜ್ಯದ ನಿಜವಾದ ಜೋಡೆತ್ತುಗಳು.
ಆರ್.ಆರ್.ನಗರ, ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದಾರೆ.
ಮುಂಬರುವ ಮಸ್ಕಿ, ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಮತಗಳಿಸಿ, ಜಯ ಗಳಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
`ಸೋಲು ಸಾಧ್ಯವಿಲ್ಲ’ : ಇವಿಎಂ ಬಗ್ಗೆ ಡಿ.ಕೆ.ಸುರೇಶ್ ಅನುಮಾನ
ಇನ್ನು ಮಸ್ಕಿ ಬೈ ಎಲೆಕ್ಷನ್ ಬೂತ್ ಮಟ್ಟದಿಂದ ಪಕ್ಷವನ್ನ ಸಂಘಟಿಸುವ ಮೂಲಕ ಪ್ರತಾಪಗೌಡ ಪಾಟೀಲ್ ರನ್ನು ಗೆಲ್ಲಿಸುತ್ತೇವೆ.
ಕಾಂಗ್ರೆಸ್ ಪಕ್ಷ ರಾಜ್ಯದ ಅಭಿವೃದ್ದಿಗಿಂತ ಸ್ವ ಅಭಿವೃದ್ದಿಗೆ ಹೆಚ್ಚು ಆದ್ಯತೆ ನೀಡುತ್ತಿದೆ. ಹೀಗಾಗಿ ರಾಜ್ಯದ ಮತದಾರರು ಕಾಂಗ್ರೆಸ್ ಪಕ್ಷವನ್ನ ಮೂಲೆ ಗುಂಪು ಮಾಡಿದ್ದಾರೆ.
ಕಾಂಗ್ರೆಸ್ ನ ಇಂದಿನ ಪರಿಸ್ಥಿತಿ ಎತ್ತು ಏರಿಗೆ ಎಳೆದರೆ, ಎಮ್ಮೆ ಕೆರೆಗೆ ಎಳೆಯಿತು ಎನ್ನುವ ಹಾಗಿದೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಕಳೆದ ಬಾರಿ ಬಿಜೆಪಿಯಿಂದ ಸ್ಪರ್ಧಿಸಿ ಸೋತಿದ್ದ ಬಸವನಗೌಡ ತುರುವಿಹಾಳ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮಾತನಾಡಿದ ರವಿಕುಮಾರ್, ಆರ್. ಬಸವನಗೌಡ ತುರುವಿಹಾಳ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ.
ಆದ್ರೆ ಆರ್. ಬಸವನಗೌಡ ತುರುವಿಹಾಳರನ್ನ ಬಿಜೆಪಿ ಪರಿಚಯಸಿದ್ದು, ಬಿಜೆಪಿ ಬೆನ್ನಿಗೆ ಚೂರಿಹಾಕಿ ಕಾಂಗ್ರೆಸ್ ಸೇರಿದ್ದಾರೆ. ಮುಂಬರುವ ದಿನಗಳಲ್ಲಿ ಮತದಾರ ಅವರಿಗೆ ತಕ್ಕ ಪಾಠವನ್ನ ಕಲಿಸುತ್ತಾನೆ ಎಂದು ಹೇಳಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel