ಅಡಿಕೆ ಬೆಳೆಗೆ ಬಿದ್ದ ಎಲೆ ಚುಕ್ಕಿ ರೋಗ ಪರಿಶೀಲಿಸಿದ ಸಿಎಂ….
ಚಿಕ್ಕಮಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಮಲೆನಾಡಿನ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.
ಕಳೆದೆರೆಡು ವರ್ಷಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅಡಿಕೆ ಮರಗಳಿಗೆ ಫಂಗಸ್ ಅಥವಾ ಎಲೆಚುಕ್ಕೆ ರೋಗ ತಗುಲಿದ್ದು, ಮರಗಳಲ್ಲಿ ಈ ರೋಗವನ್ನು ನಿಯಂತ್ರಿಸುವ ಪೋಷಕಾಂಶಗಳ ಕೊರತೆ ಇದೆ ಎಂಬುದು ಅಧ್ಯಯನದ ಮೂಲಕ ತಿಳಿದು ಬಂದಿದೆ. ಇದಕ್ಕೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ವಿಜ್ಞಾನಿಗಳು ಸಂಶೋಧನೆ ನಡೆಸಿದ್ದು, ಸರ್ಕಾರ ಅಡಿಕೆ ಬೆಳೆಗಾರರ ಹಿತ ಕಾಯಲು ಬದ್ಧವಾಗಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಆನಂತರ ತೀರ್ಥಹಳ್ಳಿ ತಾಲೂಕಿನ ಹೊಸಹಳ್ಳಿ ಗ್ರಾಮದ ರೈತರ ತೋಟಕ್ಕೆ ತೆರಳಿ ಎಲೆ ಚುಕ್ಕಿ ರೋಗವನ್ನ ಪರಿಶೀಲಿಸಿದ್ದಾರೆ. ಎಲೆ ಚುಕ್ಕಿ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು 10 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ಮಲೆನಾಡು ಭಾಗದ ನಾಲ್ಕು ಜಿಲ್ಲೆಗಳಿಗೆ ಹಣ ಒದಗಿಸಲಾಗಿದೆ ಎಂದು ಸಂಕಲ್ಪ ಯಾತ್ರಯಲ್ಲಿ ತಿಳಿಸಿದ್ದಾರೆ.
Basavaraj Bommai: CM checked the leaf spot disease that fell on the nut crop.