ಶಿವಮೊಗ್ಗದಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ – ಬಸವರಾಜ್ ಬೊಮ್ಮಾಯಿ …
ಶಿವಮೊಗ್ಗ ಜಿಲ್ಲೆಯ ಸರ್ವತೋಮುಖ ಬೆಳವಣಿಗೆಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಿವಮೊಗ್ಗದಲ್ಲಿ ನಿನ್ನೆ ತಿಳಿಸಿದ್ದಾರೆ.
ಬಿಜೆಪಿ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಸಿ ಎಂ ಬಸವರಾಜ್ ಬೊಮ್ಮಾಯಿ ಅವರು “ಆನವಟ್ಟಿ ಭಾಗದ ರೈತರಿಗೆ ತೊಂದರೆಯಾಗದಂತೆ ಏತ ನೀರಾವರಿಗೆ ನೂತನ ಯೋಜನೆ ರೂಪಿಸಲಾಗಿದ್ದು, 800 ಕೋಟಿ ರೂಪಾಯಿ ವೆಚ್ಚದ ಲಿಫ್ಟ್ ಮೂಲಕ ನೀರೆತ್ತುವ ಕಾಮಗಾರಿಗೆ ಮುಂಬರುವ ಜನವರಿ ತಿಂಗಳಲ್ಲಿ ಚಾಲನೆ ನೀಡಲಾಗುವುದು” ಎಂದು ತಿಳಿಸಿದ್ದಾರೆ.
ಪ್ರಖ್ಯಾತ ಜೋಗ ಜಲಪಾತವನ್ನು ಅಂತಾರಾಷ್ಟ್ರೀಯ ಪ್ರವಾಸೋದ್ಯಮ ತಾಣವನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದ್ದು, ಇದರಿಂದ ಉದ್ಯೋಗ ಸೃಷ್ಟಿಯಾಗಲಿದೆ. ರಾಣೆಬೆನ್ನೂರು ತಾಲೂಕಿನ ವರೆಗೆ ರೈಲು ಸಂಪರ್ಕ ಒದಗಿಸಲು ಈಗಾಗಲೇ ರೈಲ್ವೆ ಇಲಾಖೆಗೆ ಸೂಚಿಸಲಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಕೈಗೊಂಡ ಅಭಿವೃದ್ಧಿ ಯೋಜನೆಗಳ ಮುಂದುವರಿಕೆಯ ಜೊತೆಗೆ ಹಲವು ನೂತನ ಜನಪರ ಯೋಜನೆಗಳನ್ನು ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಬಿ.ಎಸ್.ಯಡಿಯೂರಪ್ಪ, ಕೃಷಿ ಕಾರ್ಮಿಕರ ಪರವಾದ ಹಲವು ಯೋಜನೆಗಳನ್ನು ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಲಾಗಿದ್ದು, ಬಡ ಹೆಣ್ಣುಮಕ್ಕಳಿಗಾಗಿ ಭಾಗ್ಯಲಕ್ಷ್ಮೀ ಯೋಜನೆ ಜಾರಿಗೊಳಿಸಿ ಸುಮಾರು 20 ಲಕ್ಷ ಹೆಣ್ಣುಮಕ್ಕಳಿಗೆ 1 ಲಕ್ಷ ರೂಪಾಯಿ ಆರ್ಥಿಕ ಸಹಾಯದ ಜೊತೆಗೆ ಹಲವು ಸವಲತ್ತುಗಳನ್ನು ಕಲ್ಪಿಸಿಕೊಡಲಾಗಿದೆ ಎಂದರು.
Basavaraj Bommai: Construction of International Airport in Shimoga – Bommai…