ಗಾಂಧಿ ಜಯಂತಿಯಂದು ನಕಲಿ ಗಾಂಧಿಗಳ ಬಗ್ಗೆ ಮಾತನಾಡಲ್ಲ…
ಗಾಂಧಿ ಜಯಂತಿಯ ದಿನದಂದು ನಕಲಿ ಗಾಂಧಿಗಳ ಬಗ್ಗೆ ನಾನು ಮಾತನಾಡುವುದಿಲ್ಲ. ಇಡೀ ಕಾಂಗ್ರೆಸ್ ಪಕ್ಷ ಬೇಲ್ನಲ್ಲಿದೆ. ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಡಿ.ಕೆ.ಶಿವಕುಮಾರ್ ಜಾಮೀನು ಮೇಲೆ ಹೊರಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ಗೆ ಕರ್ನಾಟಕ ಎಟಿಎಂ ಆಗಿತ್ತು’ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಕಿ ಕಿಡಿ ಕಾರಿದ್ದಾರೆ.
ಕರ್ನಾಟಕದಲ್ಲಿ ಈಗ ಅಧಿಕಾರದಲ್ಲಿರುವುದು ಅತ್ಯಂತ ಭ್ರಷ್ಟ ಸರ್ಕಾರ’ ಎನ್ನುವ ರಾಹುಲ್ ಗಾಂಧಿ ಹೇಳಿಕೆಗೆ “ರಾಹುಲ್ ಗಾಂಧಿ ನಕಲಿ ಗಾಂಧಿ. ಇಡೀ ಕಾಂಗ್ರೆಸ್ ಪಾರ್ಟಿ ಬೇಲ್ ಮೇಲ್ ಹೊರಗೆ ಇದೆ. ಭ್ರಷ್ಟಾಚಾರದ ಮೇಲೆ ಅವರು ಬೇಲ್ ಮೇಲೆ ಇದ್ದಾರೆ. ಅವರು ನಮ್ಮ ಬಗ್ಗೆ ಮಾತಾಡೋದಾ? ಕಾಂಗ್ರೆಸ್‍ನವರಿಗೆ ಕರ್ನಾಟಕ ATM ಆಗಿತ್ತು. ಅದು ಕೈ ತಪ್ಪಿದೆ ಅಂತ ಕಾಂಗ್ರೆಸ್‍ನವರು ಹೀಗೆ ಮಾತನಾಡುತ್ತಿದ್ದಾರೆ. ಕರ್ನಾಟಕ ಕೈ ತಪ್ಪಿದೆ ಅಂತ ಅವರಿಗೆ ಕೊರಗು ಇದೆ. ಹೀಗಾಗಿ ಆರೋಪ ಮಾಡ್ತಿದ್ದಾರೆ. ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ತಿರುಗೇಟು ನೀಡಿದ್ದಾರೆ.
‘ನಮ್ಮ ಮೇಲೆ ಮಾಡುತ್ತಿರುವ 40 ಪರ್ಸೆಂಟ್ ಆರೋಪಕ್ಕೆ ನಿಮ್ಮ ಬಳಿ ದಾಖಲೆ ಇದ್ದರೆ ಕೊಡಿ, ತನಿಖೆ ಮಾಡಿಸುತ್ತೇನೆ’ ಎಂದು ಮುಖ್ಯಮಂತ್ರಿ ಸವಾಲು ಹಾಕಿದರು.
Don’t talk about fake Gandhis on Gandhi Jayanti: CM Basavaraj Bommai hits out at Rahul Gandhi