ಕೋವಿಡ್ ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕಟ್ಟೆಚ್ಚರ – ಸಿ ಎಂ ಬೊಮ್ಮಾಯಿ…
ಕೋವಿಡ್ ಸೋಂಕು ನಿಯಂತ್ರಣಕ್ಕೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣಗಳು ಸೇರಿದಂತೆ ಎಲ್ಲೆಡೆ ಸೂಕ್ತ ಕಣ್ಗಾವಲು ವ್ಯವಸ್ಥೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ತಿಳಿಸಿದ್ದಾರೆ.
ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ರೂಪಾಂತರಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಆಂತಕ ಪಡುವ ಅಗತ್ಯವಿಲ್ಲ. ಆದರೆ, ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಪಾಲಿಸಬೇಕು. ಸರ್ಕಾರ ನಿರಂತರ ಸಭೆ, ಸಮಾಲೋಚನೆಗಳನ್ನು ನಡೆಸುತ್ತಿದ್ದು, ನಾಳೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಕಂದಾಯ ಸಚಿವ ಆರ್. ಅಶೋಕ ಮಹತ್ವದ ಸಭೆ ನಡೆಸಲಿದ್ದಾರೆ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ವಿಧಿಸಬೇಕಾದ ನಿರ್ಬಂಧಗಳ ಬಗ್ಗೆಯೂ ಚರ್ಚಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ಬೂಸ್ಟರ್ ಡೋಸ್ ಅನ್ನು ಹೆಚ್ಚಿನ ಪ್ರಮಾಣದಲ್ಲಿ ನೀಡಲು ತೀರ್ಮಾನಿಸಿದ್ದು, ಇದಕ್ಕಾಗಿ ತಾಲೂಕು ಮಟ್ಟದಲ್ಲಿ ವಿಶೇಷ ಶಿಬಿರಗಳನ್ನು ಆಯೋಜಿಸಲಾಗುವುದು ಎಂದಿದ್ದಾರೆ. ಬೆಳಗಾವಿ ಅಧಿವೇಶನದ ಉಳಿದ ಕಲಾಪದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಒತ್ತು ನೀಡಲಾಗುವುದು. ಸೋಮವಾರ ಹಾಗೂ ಮಂಗಳವಾರದಂದು ಮಹಾದಾಯಿ, ಕೃಷ್ಣಾ, ಗೋಧಾವರಿ ಸೇರಿದಂತೆ ಎಲ್ಲಾ ವಿಚಾರಗಳ ಬಗ್ಗೆಯೂ ಗಂಭೀರವಾಗಿ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
Basavaraj Bommai – Extensive vigilance to control covid infection – CM Bommai…