ಮೊದಲ ಭಾರಿಗೆ 114 “ನಮ್ಮ ಕ್ಲೀನಿಕ್” ಯೋಜನೆಗಳಿಗೆ ಬಸವರಾಜ್ ಬೊಮ್ಮಾಯಿ ಚಾಲನೆ…
ರಾಜ್ಯದಲ್ಲಿ ಮೊದಲ ಭಾರಿಗೆ 114 ‘ನಮ್ಮ ಕ್ಲಿನಿಕ್ ‘ ಯೋಜನೆಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಯಲ್ಲಿಂದು ಚಾಲನೆ ನೀಡಿದ್ದಾರೆ. ರಾಜ್ಯ ಸರ್ಕಾರ ನಿನ್ನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಬೈರಿದೇವರಕೊಪ್ಪದಲ್ಲಿ ಮೊಟ್ಟ ಮೊದಲ ನಮ್ಮ ಕ್ಲಿನಿಕ್ಗೆ ಚಾಲನೆ ನೀಡಿತು.
ನಂತರ ಮಾತನಾಡಿದ ಮುಖ್ಯಮಂತ್ರಿಗಳು ನಮ್ಮ ಕ್ಲಿನಿಕ್ ಗಳನ್ನ ಮೇಲ್ದರ್ಜೆಗೇರಿಸಲು ಮುಂದಿನ ಬಜೆಟ್ ನಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು . ವಿವಿಧ ಹಂತದ ರೋಗಗಳು ಕಂಡು ಬರುತ್ತಿರುವ ಹಿನ್ನೆಲೆಯಲ್ಲಿ ಕಡುಬಡವರಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡುವ ದೃಷ್ಟಿಯಿಂದ 437 ಕ್ಲಿನಿಕ್ ಗಳನ್ನು ಪ್ರಾರಂಭಿಸಲಾಗುತ್ತಿದೆ. ಮೊದಲನೇ ಹಂತದಲ್ಲಿ 100 ಕ್ಲಿನಿಕ್ ಗಳು ರಾಜ್ಯಾದ್ಯಂತ ಕಾರ್ಯಾರಂಭ ಮಾಡಲಿವೆ ಎಂದರು.
ಹೊಸ ವರ್ಷದ ಜನವರಿ ಅಂತ್ಯಕ್ಕೆ ಎಲ್ಲಾ 438 ʼನಮ್ಮ ಕ್ಲಿನಿಕ್ʼಗಳು ಕಾರ್ಯಾರಂಭವಾಗಲಿವೆ. ಹಾಗೆಯೇ ಮಹಿಳೆಯರಿಗೆ ಮೀಸಲಾದ ʼಆಯುಷ್ಮತಿʼ ಕ್ಲಿನಿಕ್ಗಳನ್ನೂ ಜನವರಿಯಲ್ಲೇ ಉದ್ಘಾಟಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಇತಿಹಾಸದಲ್ಲಿ ಯಾವ ಸರ್ಕಾರವೂ ಒಂದೇ ಬಾರಿಗೆ 114 ಕ್ಲಿನಿಕ್ಗಳನ್ನು ಉದ್ಘಾಟನೆ ಮಾಡಿಲ್ಲ. ಇಂದು ನಮ್ಮ ಸರ್ಕಾರದ ಮೂಲಕ ಸಾರ್ವಕಾಲಿಕ ದಾಖಲೆಯಾಗಿದೆ. ಸಾಮಾನ್ಯ ಜನರ ಮುಖ್ಯಮಂತ್ರಿಯಾಗಿರುವ, ʼಕಾಮನ್ ಮ್ಯಾನ್ʼ ಬಸವರಾಜ ಬೊಮ್ಮಾಯಿ ಅವರಿಂದ ʼನಮ್ಮ ಕ್ಲಿನಿಕ್ʼಗಳು ಉದ್ಘಾಟನೆಯಾಗಿವೆ ಎಂದು ಸುಧಾಕರ್ ತಿಳಿಸಿದರು.
Basavaraj Bommai launched 114 “Namma Clinic” projects for the first month…