ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ್ ಬೊಮ್ಮಾಯಿ basavaraj-bommai
ಬೆಂಗಳೂರು : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ರಾಜಭವನದಲ್ಲಿ ನಡೆದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೂತನ ಸಿಎಂ ಬೊಮ್ಮಾಯಿ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬೊಮ್ಮಾಯಿ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ನಿರ್ಗಮಿತ ಸಿಎಂ ಬಿ.ಎಸ್.ಯಡಿಯೂರಪ್ಪ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.