ಬಸವರಾಜ್ ಬೊಮ್ಮಾಯಿಗೆ ಮೋದಿ ಅಭಿನಂದನೆ basavaraj-bommai
ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ
ನವದೆಹಲಿ : ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಬೊಮ್ಮಾಯಿ ಅವರು ಶ್ರೀಮಂತ ಶಾಸಕಾಂಗ ಮತ್ತು ಆಡಳಿತಾತ್ಮಕ ಅನುಭವವನ್ನು ತಮ್ಮೊಂದಿಗೆ ತಂದಿದ್ದಾರೆ. ನಮ್ಮ ಸರ್ಕಾರವು ರಾಜ್ಯದಲ್ಲಿ ಮಾಡಿದ ಕಾರ್ಯಗಳನ್ನು ಅವರು ಜಾರಿಗೆ ತರುತ್ತಾರೆ ಎಂಬ ವಿಶ್ವಾಸವಿದೆ. ಅವರ ಅಧಿಕಾರಾವಧಿಗೆ ಶುಭಾಶಯಗಳು ಎಂದು ಬರೆದುಕೊಂಡಿದ್ದಾರೆ.
ಇಂದು ದೆಹಲಿಗೆ
ಸಂಜೆ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚಿಸುತ್ತೇನೆ, ಅವರ ಮತ್ತು ಕೇಂದ್ರ ವರಿಷ್ಠರ ಸಲಹೆಗಳನ್ನು ಪಡೆದು ಮುಂದಿನ ಕೆಲಸಕ್ಕೆ ಕಾಲಿಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.