ಶ್ರೀಶೈಲಂನಲ್ಲಿ ಪರೀಸ್ಥಿತಿ ತಿಳಿಗೊಂಡಿದೆ : ಸಿಎಂ ಬೊಮ್ಮಾಯಿ
ಬೆಂಗಳೂರು : ಆಂದ್ರಪ್ರದೇಶದ ಶ್ರೀಶೈಲಂನಲ್ಲಿ ಸಧ್ಯಕ್ಕೆ ಪರಿಸ್ಥಿತಿ ತಿಳಿಗೊಂಡಿದೆ. ನಾನು ಆಂಧ್ರಪ್ರದೇಶದ ಅಧಿಕಾರಿಗಳ ಜೊತೆ ಮಾತನಾಡಿ ಮಾಹಿತಿ ಪಡೆದಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಡಿದ ಅವರು ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದಿದ್ದೇನೆ. ನೀರಿನ ವಿಚಾರಕ್ಕಾಗಿ ಪ್ರಾರಂಭವಾದ ಗಲಾಟೆ ತೀರ್ವಸ್ವರೂಪ ಪಡೆದುಕೊಂಡು, ಓರ್ವ ಸಾವನ್ನಪ್ಪಿದ್ದಾನೆ. ಅಲ್ಲದೇ ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದರು.
ಘಟನೆ ಸಂಬಂಧ ಆಂದ್ರಪ್ರದೇಶದ ಮುಖ್ಯಮಂತ್ರಿ ಜಗನ್ಮೋಹನ್ ರೆಡ್ಡಿ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳುಹಿಸದಂತೆ ಎಲ್ಲರೂ ಎಚ್ಚರ ವಹಿಸಬೇಕಾದ ಅಗತ್ಯವಿದೆ. ಶ್ರೀಶೈಲಕ್ಕೆ ಕರ್ನಾಟಕ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ದೊಡ್ಡ ಮಟ್ಟದಲ್ಲಿ ಭಕ್ತರು ಸೇರುತ್ತಾರೆ. ಭಕ್ತರು ಬಂದಾಗ ಇಂತಹ ಘಟನೆಗಳು ನಡೆಯಬಾರದು. ಏನೇ ಸಣ್ಣಪುಟ್ಟ ಗೊಂದಲಗಳಿದ್ದರೂ ನಾವೆಲ್ಲರೂ ಅನುಸರಿಸಿಕೊಂಡು ಹೋಗಬೇಕು ಎಂದರು.