ಬೆಡ್ ಕೊರತೆ ಸಮಸ್ಯೆಗೆ ಪರಿಹಾರ ಹುಡುಕುತ್ತಿದ್ದೇವೆ : ಬೊಮ್ಮಾಯಿ
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ಬೆಡ್ ಕೊರತೆ ಕೂಡ ಹೆಚ್ಚಾಗುತ್ತಿದೆ.
ಈ ಬಗ್ಗೆ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಬೆಡ್ ಕೊರತೆ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದೇವೆ.
ನಿನ್ನೆಯೂ ಹಿರಿಯ ಐಎಎಸ್ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಲ್ಲಿ ಗುಣಮುಖರಾದವರು ಡಿಸ್‍ಚಾರ್ಜ್ ಆದನಂತರ ಖಾಲಿಯಾಗುವ ಬೆಡ್ ಗೆ ಸರ್ಕಾರದಿಂದ, ವಾರ್ ರೂಂ ಮೂಲಕ ಸೂಚಿಸಿದವರನ್ನು ಮಾತ್ರ ದಾಖಲಿಸಿಕೊಳ್ಳಬೇಕು. ಆಸ್ಪತ್ರೆಗಳೇ ನೇರವಾಗಿ ದಾಖಲಿಸಿಕೊಳ್ಳುವಂತಿಲ್ಲ ಎಂದು ಸೂಚನೆ ನೀಡಿದರು.
ಇನ್ನು ರೋಗಿ ಮೃತಪಟ್ಟ ನಂತರವೂ ಅವರ ಹೆಸರಲ್ಲೆ ಬೆಡ್ ಉಳಿಸಿಕೊಂಡಿದ್ದ ಬೆಂಗಳೂರಿನ ಮೂರು ಆಸ್ಪತ್ರೆಗಳ ಮೇಲೆ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.
ಮೂವತ್ತಕ್ಕೂ ಕಡಿಮೆ ಹಾಸಿಗೆ ಸಾಮಥ್ರ್ಯದ ಆಸ್ಪತ್ರೆಗಳನ್ನು ನಮ್ಮ ಆರೋಗ್ಯಮಿತ್ರ ಲಿಸ್ಟ್ ನಲ್ಲಿ ಸೇರಿಸಿಕೊಂಡಿರಲಿಲ್ಲ.
ಈಗ ಆ ರೀತಿಯ ಹಲವಾರು ನಸಿರ್ಂಗ್ ಹೋಂ ಮತ್ತು ಆಸ್ಪತ್ರೆಗಳಲ್ಲಿ ಸುಮಾರು 2000 ಬೆಡ್ ಲಭ್ಯವಿದೆ. ಆ ಆಸ್ಪತ್ರೆಗಳನ್ನು ಆರೋಗ್ಯ ಮಿತ್ರ ಪಟ್ಟಿಗೆ ಸೇರಿಸಿಕೊಳ್ಳಲಾಗುತ್ತದೆ ಎಂದು ಮಾಹಿತಿ ನೀಡಿದರು.