ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾದ ಬಸವರಾಜ್ ಹೊರಟ್ಟಿ…..
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಇಂದು ಅಧಿಕೃತವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಅಮಿತ್ ಶಾ ಅವರನ್ನ ಬೇಟಿ ಮಾಡಿ ಮಾತುಕತೆ ನಡೆಸಿದರು.
ನಂತರ ಮಾತನಾಡಿದ ಬಸವರಾಜ್ ಹೊರಟ್ಟಿ ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ರಾಜಿನಾಮೆ ಕೊಡುತ್ತೇನೆ. ಬಿಜೆಪಿ ಬರುವುದು ಒಳ್ಳೆಯದು ಎಂದು ಅಮಿತ್ ಶಾ ಹೇಳಿದ್ದಾರೆ. ಜೆಡಿಎಸ್ ಮೆಲೆ ನನಗೆ ಒಳ್ಳೆಯ ಅಭಿಪ್ರಾಯವಿದೆ ಮತದಾರರ ಅಭಿಪ್ರಾಯದ ಮೇಲೆ ಬಿಜೆಪಿ ಸರ್ಪಡೆಯಾಗುತ್ತಿದ್ದೇನೆ ಎಂದು ತಿಳಿಸಿದರು.
ಇದೇ ತಿಂಗಳ 11 ಕ್ಕೆ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜಿನಾಮೆ ನೀಡಲಿದ್ದಾರೆ. ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಸಚಿವರಾದ ಅರಗ ಜ್ಞಾನೇಂದ್ರ ಆರ್ ಅಶೋಕ್, ಕೋಟ ಶ್ರೀನಿವಾಸ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು..








