Basavaraj Horatti | ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ
ಹುಬ್ಬಳ್ಳಿ : ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ, ಅನ್ಯಾಯ ಸರಿಪಡಿಸಲು ಕೇಳೋಣ ಎಂದು ಸಚಿವ ಉಮೇಶ್ ಕತ್ತಿಗೆ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿರುಗೇಟು ನೀಡಿದ್ದಾರೆ.
ಪ್ರತ್ಯೇಕ ರಾಜ್ಯದ ಬಗ್ಗೆ ಉಮೇಶ್ ಕತ್ತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಬಸವರಾಜ ಹೊರಟ್ಟಿ, ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು.
ಕರ್ನಾಟಕ ಏಕೀಕರಣದಲ್ಲಿ ನಡೆದ ಹೋರಾಟ ನೆನಪಿಸಿಕೊಳ್ಳಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಉಮೇಶ್ ಕತ್ತಿ ಹೇಳಿಕೆಯನ್ನು ಬಿಜೆಪಿಯಲ್ಲಿ ಯಾರು ಖಂಡಿಸುತ್ತಾರೋ, ಇಲ್ವೋ ಗೊತ್ತಿಲ್ಲ.
ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದು ಹೊರಟ್ಟಿ ಕಿಡಿಕಾರಿದರು.
ಅಲ್ಲದೇ ಏಕೀಕರಣ ಹೋರಾಟದ ಉದ್ದೇಶ ಸಹಬಾಳ್ವೆ. ಏಕೀಕರಣ ಉದ್ದೇಶ ಮರೆತು ಮಾತನಾಡುವುದು ಸರಿಯಲ್ಲ.
ಉಮೇಶ್ ಕತ್ತಿ 2009ರಲ್ಲಿ ಹೀಗೆಯೇ ಹೇಳಿದ್ದರು. ನನ್ನ ಮಗ ಮುಖ್ಯಮಂತ್ರಿ ಆಗ್ತಾನೆ ಅಂತ ಹೇಳಿದ್ದರು.
ಅದನ್ನು ಬಿಟ್ಟು ಪ್ರತ್ಯೇಕ ರಾಜ್ಯದ ಕೂಗು ಸರಿಯಲ್ಲ. ಪ್ರಾದೇಶಿಕ ಅಸಮಾನತೆ ಸರಿಪಡಿಸಲು ಸರ್ಕಾರಕ್ಕೆ ಕೇಳೋಣ, ಅನ್ಯಾಯ ಸರಿಪಡಿಸಲು ಕೇಳೋಣ ಎಂದು ಹೊರಟ್ಟಿ ಮನವಿ ಮಾಡಿಕೊಂಡಿದ್ದಾರೆ.








