Basavaraja Bommai | ಬಿಜೆಪಿಯ ಜನಸಂಕಲ್ಪ ಯಾತ್ರೆ ಪುನಾರಂಭ
ಬೆಂಗಳೂರು : ಬಿಜೆಪಿಯ ಜನಸಂಕಲ್ಪ ಯಾತ್ರೆ ಪುನಾರಂಭವಾಗಲಿದ್ದು, ಉಡುಪಿ, ಗದಗ, ಹಾವೇರಿ ಭಾಗದಲ್ಲಿ ಯಾತ್ರೆ ನಡೆಯಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಜನಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ ಸಿಗುತ್ತಿದ್ದು, ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆತಿದೆ.

ಅಲ್ಲದೇ, ಬಳ್ಳಾರಿಯಲ್ಲಿ ಪರಿಶಿಷ್ಟ ಪಂಗಡ ಹಾಗೂ ಮೈಸೂರಿನಲ್ಲಿ ಪರಿಶಿಷ್ಟ ಜಾತಿ ಸಮಾವೇಶ ಹಮ್ಮಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಿಮಾಚಲ ಪ್ರದೇಶ ಚುನಾವಣೆ ಪ್ರಚಾರದಲ್ಲಿ ತೊಡಗಿ ಕೊಂಡಿರುವುದರಿಂದ ಭೇಟಿ ಸಾಧ್ಯವಾಗಿಲ್ಲ.
ಜೆ.ಪಿ.ನಡ್ಡಾ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸಚಿವ ಸಂಪುಟ ವಿಸ್ತರಿಸಲಾಗುವುದು ಎಂದರು.








