ಜಗತ್ತೇ ಅಚ್ಚರಿ ಪಡೋ ರೀತಿ ಮೋದಿ ದೇಶವನ್ನು ಮುನ್ನಡೆಸುತ್ತಿದ್ದಾರೆ : ಬಿಎಸ್ ವೈ Basavaraja bommai
ಮೈಸೂರು : ಪ್ರಧಾನಿ ನರೇಂದ್ರ ಮೋದಿ ಇಡೀ ಜಗತ್ತೇ ಅಚ್ಚರಿ ಪಡುವ ರೀತಿ ದೇಶವನ್ನು ಮುನ್ನಡೆಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಬಿಎಸ್ ಯಡಿಯೂರಪ್ಪನವರು ಇಂದು ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ್ದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು.
ನರೇಂದ್ರ ಮೋದಿ ಇಡೀ ಜಗತ್ತೇ ಅಚ್ಚರಿ ಪಡುವ ರೀತಿ ದೇಶವನ್ನು ಮುನ್ನಡೆಸುತ್ತಿದ್ದಾರೆ.
ಅವರು ಮತ್ತೊಂದು ಅವಧಿಗೆ ಪ್ರಧಾನಿಯಾಗಬೇಕೆಂಬುದು ನಮ್ಮ ಅಪೇಕ್ಷೆಯಾಗಿದೆ ಎಂದು ತಿಳಿಸಿದರು.
ಇನ್ನು ಬೊಮ್ಮಾಯಿ ಆಡಳಿತದ ಬಗ್ಗೆ ಮಾತನಾಡಿ, ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಒಳ್ಳೆಯ ಆಡಳಿತ ನೀಡುತ್ತಿದ್ದಾರೆ.
ಕರ್ನಾಟಕವನ್ನು ಮಾದರಿ ರಾಜ್ಯವನ್ನಾಗಿ ಮಾಡುವ ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡುತ್ತಾರೆ ಎಂದರು.