Basavaraja Bommai | ಪ್ರತಿದಿನ 1 ತಾಸು ಹೆಚ್ಚು ಕೆಲಸ ಮಾಡುವಂತೆ ನೌಕರರಿಗೆ ಸಿಎಂ ಸಲಹೆ
ಬೆಂಗಳೂರು : ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ 7ನೇ ವೇತನ ಆಯೋಗ ರಚಿಸಿದ್ದಕ್ಕಾಗಿ ಸರ್ಕಾರಿ ನೌಕರರ ಸಂಘದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.
ಬಳಿಕ ಮಾತನಾಡಿದ ಮುಖ್ಯಮಂತ್ರಿ ಅವರು, ಸರ್ಕಾರಿ ನೌಕರರ ವೇತನ ಹಾಗೂ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ.
ಅದಕ್ಕೆ ಪ್ರತಿಯಾಗಿ ಸರ್ಕಾರಿ ನೌಕರರು ಪ್ರತಿದಿನ 8 ಗಂಟೆ ಜೊತೆಗೆ ಒಂದು ಗಂಟೆ ಹೆಚ್ಚಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ನವಭಾರತ ನಿರ್ಮಾಣಕ್ಕೆ ನವ ಕರ್ನಾಟಕ ನಿರ್ಮಾಣದ ಮೂಲಕ ಅಡಿಪಾಯ ಹಾಕಲಾಗುವುದು.
ದೇಶದ ಐದು ಟ್ರಿಲಿಯನ್ ಆರ್ಥಿಕತೆಗೆ ಕರ್ನಾಟಕ ಒಂದು ಟ್ರಿಲಿಯನ್ ಆರ್ಥಿಕ ಪ್ರಗತಿಯ ಪಾಲು ನೀಡುವ ಗುರಿಯೊಂದಿಗೆ ಕೆಲಸ ನಿರ್ವಹಿಸುತ್ತಿದೆ.
ಸರ್ಕಾರದ ಅಧಿಕಾರಿಗಳು, ನಿರ್ಣಯಗಳನ್ನು ತೆಗೆದುಕೊಳ್ಳುವಾಗ ಬಡವರ ಶ್ರೇಯೋಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.
ಸಚಿವರಾದ ಆರ್. ಅಶೋಕ, ಸಿ.ಸಿ. ಪಾಟೀಲ್ , ಎಂ.ಟಿಬಿ ನಾಗರಾಜ್, ಮುನಿರತ್ನ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.








