Basavaraja Bommai | ಶೀಘ್ರದಲ್ಲಿಯೇ ಕಲಬುರಗಿಯಲ್ಲಿ ಜವಳಿ ಪಾರ್ಕ್ ಗೆ ಅಡಿಗಲ್ಲು
ಕಲಬುರಗಿ : ಕಲ್ಬುರ್ಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಿ ಸ್ಥಳೀಯ 25 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಮಹತ್ತರ ಯೋಜನೆಗೆ ನಾನೇ ಶೀಘ್ರದಲ್ಲಿಯೇ ಅಡಿಗಲ್ಲು ಹಾಕಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದ್ದಾರೆ.
ಕಲಬುರ್ಗಿಯಲ್ಲಿ ಮಾತನಾಡಿದ ಸಿಎಂ, ಕಲ್ಯಾಣ ಕರ್ನಾಟಕದ ಪ್ರದೇಶ ಎಂದರೇ ನನಗೆ ಅಚ್ಚುಮೆಚ್ಚು. ನನ್ನ ಹೃದಯಕ್ಕೆ ಹತ್ತಿರವಾದ ಪ್ರದೇಶವಾಗಿದೆ.
ನವ ಕಲ್ಯಾಣ ಕರ್ನಾಟಕದಿಂದ ನವ ಕರ್ನಾಟಕ ನಿರ್ಮಾಣ, ನವ ಕರ್ನಾಟಕದಿಂದ ನವಭಾರತ ನಿರ್ಮಾಣ. ಇದು ನಮ್ಮ ಸರ್ಕಾರದ ಸಂಕಲ್ಪವಾಗಿದೆ..
ಅಭಿವೃದ್ಧಿ ಎನ್ನುವುದು ನಿರಂತರ ಪ್ರಕ್ರಿಯೆ. ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹಿಂದಿನ ಬಜೆಟ್ ನಲ್ಲಿ 3000ಕೋಟಿ ರೂ ನೀಡಿದ್ದೇವು.
ಮುಂದಿನ ಬಜೆಟ್ ನಲ್ಲಿ ಕಲ್ಯಾಣ ಕರ್ನಾಟಕಕ್ಕೆಂದು 5000ಕೋಟಿ ಮೀಸಲಿರಿಸಲಿದ್ದೇವೆ.
ಕಲ್ಬುರ್ಗಿಯಲ್ಲಿ ಜವಳಿ ಪಾರ್ಕ್ ಸ್ಥಾಪಿಸಿ ಸ್ಥಳೀಯ 25 ಸಾವಿರ ಜನರಿಗೆ ಉದ್ಯೋಗ ದೊರಕಿಸುವ ಮಹತ್ತರ ಯೋಜನೆಗೆ ನಾನೇ ಶೀಘ್ರದಲ್ಲಿಯೇ ಅಡಿಗಲ್ಲು ಹಾಕಲಿದ್ದೇನೆ.
ಜಯದೇವ ಆಸ್ಪತ್ರೆಯನ್ನು ಪ್ರಧಾನಿ ನರೇಂದ್ರ ಮೋದಿಯವರ ಅಮೃತ ಹಸ್ತದಿಂದ ಉದ್ಘಾಟಿಸುತ್ತೇವೆ ಎಂದು ಮಾಹಿತಿ ನೀಡಿದರು.