ಇನ್ನೊಂದು ಗಂಟೆಯಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ
ಬೆಂಗಳೂರು : ಇನ್ನೊಂದು ಗಂಟೆಯಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಪಟ್ಟಿ ಪ್ರಕಟವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ನೂತನ ಸಚಿವರಿಗೆ ಖಾತೆಗಳ ಹಂಚಿಕೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಇನ್ನೊಂದು ಗಂಟೆಯಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಆಗಲಿದೆ.
ಖಾತೆ ಹಂಚಿಕೆ ವಿಚಾರವಾಗಿ ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇಂದು ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುತ್ತೆ. ಇನ್ನೊಂದು ಗಂಟೆಯಲ್ಲಿ ಸಚಿವರ ಖಾತೆ ಹಂಚಿಕೆ ಪಟ್ಟಿ ಪ್ರಕಟವಾಗಲಿದೆ. ಖಾತೆ ಹಂಚಿಕೆಯಲ್ಲಿ ಯಾವ ಗೊಂದಲವೂ ಇಲ್ಲ ಎಂದು ಹೇಳಿದ್ದಾರೆ.
ನಾನು ಬಹಳ ಅದೃಷ್ಟದ ಮುಖ್ಯಮಂತ್ರಿ, ಮಂತ್ರಿ ಸ್ಥಾನಕ್ಕಾಗಿ ಯಾರೂ ಕೂಡ ಪ್ರಭಾವ ಬೀರಿಲ್ಲ. ಖಾತೆ ಹಂಚಿಕೆಯಲ್ಲಿ ಯಾವ ಗೊಂದಲವೂ ಇಲ್ಲ. ಖಾತೆ ಹಂಚಿಕೆ ಪಟ್ಟಿಯನ್ನು ರಾಜಭವನಕ್ಕೆ ಕಳುಹಿಸುತ್ತೇವೆ. ಇನ್ನೊಂದು ಗಂಟೆಯಲ್ಲಿ ಖಾತೆ ಹಂಚಿಕೆ ಪಟ್ಟಿ ಪ್ರಕಟವಾಗಲಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ.









