ದೆಹಲಿಯತ್ತ ಸಿಎಂ | ಬುಧವಾರ ನೂತನ ಸಚಿವರ ಪದಗ್ರಹಣ Basavaraja bommai saaksha tv
ಬೆಂಗಳೂರು : ರಾಜ್ಯದಲ್ಲಿ ಸಚಿವ ಸಂಪುಟ ರಚನೆ ಕಸರತ್ತು ಮುಂದುವರೆದಿದೆ. ಮಂತ್ರಿಗಿರಿಗಾಗಿ ಸಚಿವಾಕಾಂಕ್ಷಿಗಳ ಲಾಬಿ ಮುಂದುವರಿದಿದ್ದು, ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಸಂಪುಟ ರಚನೆ ಹಿನ್ನೆಲೆಯಲ್ಲಿ ನಾಳೆ ಸಿಎಂ ಪಕ್ಷದ ವರಿಷ್ಠರನ್ನು ಭೇಟಿ ಮಾಡಲಿದ್ದಾರೆ.
ಸದ್ಯ ಸಿಎಂ ಬಸವರಾಜ ಬೊಮ್ಮಾಯಿ ಆರು ಮಂದಿ ಸಚಿವರ ಹೆಸರನ್ನು ತಮ್ಮ ಬಳಿ ಇಟ್ಟುಕೊಂಡಿದ್ದು, ಹೈಕಮಾಂಡ್ 7 ಮಂದಿ ಹಸರನ್ನು ಪ್ರಸ್ತಾಪ ಮಾಡಿದೆ ಎಂದು ಹೇಳಲಾಗುತ್ತಿದೆ.
ಒಟ್ಟಾರೆ ಮೊದಲ ಹಂತದಲ್ಲಿ 15 ರಿಂದ 20 ಜನ ಸಚಿವರು ಇರುವ ಸಾಧ್ಯತೆಗಳಿವೆ.
ಬಿಜೆಪಿ ಮೂಲಗಳ ಪ್ರಕಾರ ಮಂಗಳವಾರ ಸಂಪುಟಕ್ಕೆ ಸೇರುವ ಸಚಿವರ ಪಟ್ಟಿ ಸಿದ್ಧಗೊಳ್ಳಲಿದ್ದು, ಬುಧವಾರ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆಂದು ತಿಳಿದುಬಂದಿದೆ.