ನೈಟ್ ಕರ್ಫ್ಯೂ ಜೊತೆಗೆ ಹಲವು ಕಠಿಣ ನಿಯಮ : ಬೊಮ್ಮಾಯಿ Basavaraja bommai saaksha tv
ಮೈಸೂರು: ಇದೇ 28 ರಿಂದ ಜಾರಿಯಾಗಲಿರುವ ನೈಟ್ ಕರ್ಫ್ಯೂ ಆದೇಶವನ್ನು ಪುನರ್ ಪರಿಶೀಲನೆ ಮಾಡೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಅಕ್ಕ ಪಕ್ಕದ ಕೊರೊನಾ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.
ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಅನ್ನೋದು ಗಮನಕ್ಕೆ ಬಂದಿದೆ.
ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಫೆಬ್ರವರಿಯಲ್ಲಿ ಓಮಿಕ್ರಾನ್ ಜಾಸ್ತಿ ಆಗುತ್ತೆ ಅನ್ನೋ ವಿಚಾರವಾಗಿ ಮಾತನಾಡಿದ ಬೊಮ್ಮಾಯಿ, ಇದು ಕೇವಲ ಅಂದಾಜು ಮಾತ್ರ.
ಅದಕ್ಕೆ ಯಾವುದೇ ಪುರಾವೆ ಇಲ್ಲ. ದೇಶಾದ್ಯಂತ ಓಮಿಕ್ರಾನ್ ಬಗ್ಗೆ ಕಟ್ಟೆಚ್ಚರಿಕೆ ವಹಿಸಲಾಗಿದೆ.
ಯೂರೋಪ್ ದೇಶಗಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡ ನಂತರ ನಮ್ಮಲ್ಲಿ ಕಾಣಿಸಿಕೊಂಡಿತ್ತು.
ಅದೇ ಆಧಾರದಲ್ಲಿ ತಜ್ಞರು ಹೇಳಿದ್ದಾರೆ. ಅದಾಗ್ಯೂ ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸುತ್ತಿದ್ದೇವೆ ಎಂದು ಭರವಸೆ ನೀಡಿದ್ದಾರೆ.









