ಸಿಎಂ ನಿವಾಸಕ್ಕೆ ಸಚಿವಾಕಾಂಕ್ಷಿಗಳ ಪರೇಡ್..! Basavaraja bommai saaksha tv
ಬೆಂಗಳೂರು : ರಾಜ್ಯದಲ್ಲಿ ನೂತನ ಸಿಎಂ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಮಂತ್ರಿಗಿರಿಗಾಗಿ ಸಚಿವಾಕಾಂಕ್ಷಿಗಳು ಲಾಬಿ ನಡೆಸಲು ಆರಂಭಿಸಿದ್ದಾರೆ. ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸಕ್ಕೆ ಮಾಜಿ ಸಚಿವರು, ಶಾಸಕರು ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.
ಶ್ರೀನಿವಾಸ ಪೂಜಾರಿ, ರೇಣುಕಾಚಾರ್ಯ, ಹೆಚ್ ನಾಗೇಶ್ ಸೇರಿದಂತೆ ಹಲವು ಬೊಮ್ಮಾಯಿ ಅವರ ಆರ್ ಟಿ ನಗರ ನಿವಾಸಕ್ಕೆ ಭೇಟಿ ನೀಡಿದ್ದಾರೆ.
ಇತ್ತ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೂ ಸಚಿವಾಕಾಂಕ್ಷಿಗಳು ಪರೇಡ್ ನಡೆಸುತ್ತಿದ್ದಾರೆ.
ಮುಖ್ಯವಾಗಿ ಕಟೀಲ್ ಅವರದ್ದು ಎನ್ನಲಾಗಿರುವ ಆಡಿಯೋದಲ್ಲಿ ಹೊಸ ಮುಖಗಳಿಗೆ ಮಣೆ ಹಾಕುವ ಸಾಧ್ಯತೆಗಳಿವೆ ಎನ್ನುವ ಮಾಹಿತಿ ಇದ್ದು, ಸಚಿವಾಕಾಂಕ್ಷಿಗಳ ಪಟ್ಟಿ ಹನುಮಂತನ ಬಾಲದಂತೆ ಬೆಳೆಯುತ್ತಿದೆ.