Basavaraja Bommai | ಅನ್ನಭಾಗ್ಯಕ್ಕೆ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯಗೆ ಸಲ್ಲುತ್ತೆ
ಬೆಂಗಳೂರು : ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಜನಸ್ಪಂದನ ಕಾರ್ಯಕ್ರಮಕ್ಕೆ ಅಭೂತಪೂರ್ವ ಜನಸ್ಪಂದನೆ ದೊರಕಿದೆ. ಇದು ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಒಪ್ಪಿಕೊಂಡಿದ್ದಾರೆ ಎಂಬುದಕ್ಕೆ ಸಾಕ್ಷಿಯಾಗಿದೆ.
ಅನ್ನಭಾಗ್ಯದ ಅವ್ಯವಹಾರ ತನಿಖೆ ನಡೆಸುತ್ತಿದ್ದ ಅನುರಾಗ್ ತಿವಾರಿ ಉತ್ತರ ಪ್ರದೇಶದಲ್ಲಿ ಅನುಮಾನಸ್ಪದವಾಗಿ ಸಾವೀಗಿಡಾದರು. ಇದು ಸಿದ್ದರಾಮಯ್ಯನವರ ಆಡಳಿತದ ಪಾರದರ್ಶಕತೆ. ಅನ್ನಭಾಗ್ಯಕ್ಕೂ ಕನ್ನ ಹಾಕಿದ ಕೀರ್ತಿ ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ.
ನಾವು ಜಾತಿ, ಧರ್ಮಗಳನ್ನು ನೋಡದೇ ಎಲ್ಲರ ಮಕ್ಕಳಿಗೂ ರೈತ ವಿದ್ಯಾ ನಿಧಿಯೋಜನೆಯನ್ನು ವಿಸ್ತರಿಸಿದ್ದೇವೆ. 21ನೇ ಶತಮಾನ ಜ್ಞಾನದ ಶತಮಾನ. ನಮ್ಮ ಕರ್ನಾಟಕದ ಮಕ್ಕಳು ಇತರರಿಗೂ ಪೈಪೋಟಿ ನೀಡುವಂತಹ ವಾತಾವರಣ ಕಲ್ಪಿಸುತ್ತಿದ್ದೇವೆ.
ಹಾಲು ಉತ್ಪಾದಕರಿಗೆ ಕ್ಷೀರ ಅಭಿವೃದ್ಧಿ ಬ್ಯಾಂಕ್ , ಎಸ್ ಸಿ ಎಸ ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ಮುಂತಾದುವು ನಮ್ಮವಿನೂತನ ಯೋಜನೆಗಳು ಎಂದು ತಿಳಿಸಿದ್ದಾರೆ.