Basavaraja Bommai | ಕಾಂಗ್ರೆಸ್ ನ ಕನಸು ಕನಸಾಗಿಯೇ ಉಳಿಯಲಿದೆ
ರಾಯಚೂರು : ಕಾಂಗ್ರೆಸ್ ನಾಯಕರ ಕನಸು ಕನಸಾಗಿಯೇ ಉಳಿಯಲಿದೆ. ನಮ್ಮ ವಿರುದ್ಧ ಸುಳ್ಳು ಆರೋಪ ಮಾಡಿದರೆ ಜನ ನಿಮ್ಮನ್ನು ಬಿಡಲ್ಲ.
ಕಾಂಗ್ರೆಸ್ಸಿಗರು ಈಗಿರುವ ಸ್ಥಾನ ಉಳಿಸಿಕೊಳ್ಳುವ ಪ್ರಯತ್ನ ಮಾಡಲಿ. ರಾಯಚೂರು ಜಿಲ್ಲೆಯಲ್ಲಿ ಏಳಕ್ಕೆ 7 ಕ್ಷೇತ್ರಗಳಲ್ಲೂ ಗೆಲ್ಲುತ್ತೇವೆ.
ರಾಯಚೂರು ಜಿಲ್ಲೆಯಿಂದಲೇ ವಿಜಯ ಸಂಕಲ್ಪ ಶುರು ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಯಚೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ 2023ಕ್ಕೆ ಮತ್ತೊಮ್ಮೆ ಕಮಲ ಅರಳಿಸುವ ಸಂಕಲ್ಪ ಮಾಡಿದ್ದೇವೆ.

ನಾವು ರೈತರು, ಬಡವರು, ವಿದ್ಯಾರ್ಥಿಗಳಿಗಾಗಿ ಯೋಜನೆ ಜಾರಿಗೆ ಮಾಡಿದ್ದೇವೆ ಎಂದು ವಿವರಿಸಿದರು.
ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ “ಬೊಮ್ಮಾಯಿ ಆರ್ಎಸ್ಎಸ್ ಕೈಗೊಂಬೆ” ಎಂಬ ಹೇಳಿಕೆಗೆ ಟಾಂಗ್ ನೀಡಿದ ಬೊಮ್ಮಾಯಿ, ಆರ್ಎಸ್ಎಸ್ ಇಡೀ ಭಾರತವನ್ನು ಒಗ್ಗೂಡಿಸುತ್ತಿದೆ.
ಆರ್ಎಸ್ಎಸ್ ದೇಶದಲ್ಲಿ ದೀನದಲಿತರ ಸೇವೆ ಮಾಡುತ್ತಿದೆ. ಕಾಂಗ್ರೆಸ್ಗೆ ಆರ್ಎಸ್ಎಸ್ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ಮಾಡಿದರು.
ಇದನ್ನೂ ಓದಿ:https://saakshatv.com/shivanagowda-nay…ತಿದ್ದರೇ-ಒಂದು-ಸ್ಥ/








