Basavaraja Bommai | ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧ
ಕಲಬುರಗಿ : ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಿಸಿದ್ದಾರೆ.
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಇಂದು ಕಲಬುರಗಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪೊಲೀಸ್ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಇದಕ್ಕೂ ಮುನ್ನಾ ಸರ್ದಾರ್ ವಲ್ಲಭಬಾಯ್ ಪಟೇಲ್ ಪುತ್ಥಳಿಗೆ ನಮನ ಸಲ್ಲಿಸಿದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಕಲ್ಯಾಣ ಕರ್ನಾಟಕ ಮಹೋತ್ಸವ ನಮ್ಮೆಲರಿಗೂ ಸ್ಪೂರ್ತಿ.
ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಾವು ಬದ್ಧ.
ಸಮಗ್ರ ಅಭಿವೃದ್ಧಿ ಕನಸು ನನಸು ಮಾಡುವುದೇ ನಮ್ಮ ಗುರಿ ಎಂದು ಘೋಷಿಸಿದರು.
ಇತ್ತ ಯಾದಗಿರಿಯಲ್ಲಿ ೭೫ನೇ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಜಿಲ್ಲಾಡಳಿತದಿಂದ ಆಯೋಜನೆ ಮಾಡಲಾಗಿತ್ತು.
ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಅವರು ಧ್ವಜಾರೋಹಣ ನೆರವೇರಿಸಿದರು.