ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಬೊಮ್ಮಾಯಿ

1 min read
Basavaraja-bommai saaksha tv

ಭೂಪೇಂದ್ರ ಪಟೇಲ್ ಅವರಿಗೆ ಶುಭ ಕೋರಿದ ಬೊಮ್ಮಾಯಿ

ಗಾಂಧಿನಗರ : ಗುಜರಾತ್ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಅವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಶುಭಕೋರಿದ್ದಾರೆ.

ಗಾಂಧಿನಗರದ ರಾಜಭವನದಲ್ಲಿ ಪಟೇಲ್ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಇಂದು ಅಧಿಕಾರ ಸ್ವೀಕರಿಸಿದ ಭೂಪೇಂದ್ರ ಪಟೇಲ್ ಶುಭಾಶಯ ತಿಳಿಸಿದರು.

Basavaraja-bommai saaksha tv

ಈ ವೇಳೆ ಸಿಎಂ ಜೊತೆ ತೆರಳಿದ್ದ ಸಚಿವರಾದ ಆರ್ ಅಶೋಕ್, ಮುರುಗೇಶ್ ನಿರಾಣಿ, ಡಾ. ಕೆ ಸುಧಾಕರ್ ಅವರಿಂದಲೂ ನೂತನ ಸಿಎಂ ಭೂಪೇಂದ್ರ ಪಟೇಲ್ ಅವರಿಗೆ ಶುಭಾಷಯ ಕೋರಿದರು.

ಇದಾದ ಬಳಿಕ ಕೇಂದ್ರ ಗೃಹ ಅಚಿವ ಅಮಿತ್ ಷಾ, ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ ಜೋಶಿ, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ ಜತೆ ಚರ್ಚೆ ನಡೆಸಿದರು.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd