Basavaraja Bommayi
ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರು. ಅವರ ನೇತೃತ್ವದಲ್ಲಿ ಮುಂದಿನ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು ‘ ಯಡಿಯೂರಪ್ಪ ಅವರು ನಮ್ಮ ಪ್ರಶ್ನಾತೀತ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ 2018 ರ ಚುನಾವಣೆಯನ್ನು ಎದುರಿಸಿ ಅವರ ನಾಯಕತ್ವದಲ್ಲೇ ಸರಕಾರವನ್ನು ಸಹ ರಚಿಸಲಾಗಿದೆ. ಅವರು ಸರಕಾರದ ಉಳಿದ ಅವಧಿಯನ್ನು ಪೂರ್ಣಗೊಳಿಸಿ ಮುಂದಿನ ಚುನಾವಣೆಯನ್ನು ಕೂಡಾ ಅವರ ನೇತೃತ್ವದಲ್ಲಿಯೇ ಎದುರಿಸಲಾಗುವದು ಎಂದು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ, ಕೆಲವರು ನೀಡುತ್ತಿರುವ ಇದರ ವ್ಯತಿರಿಕ್ತ ಹೇಳಿಕೆಗಳಿಗೆ ಯಾವುದೇ ಅರ್ಥ ಇರುವುದಿಲ್ಲ’ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ಶಾಸಕ ಯತ್ನಾಳ ಅವರಿಗೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ ಬೊಮ್ಮಾಯಿ.
ಮೈತ್ರಿ ಸರ್ಕಾರ ಬೀಳಿಸಿದ್ದು ಸಿದ್ದರಾಮಯ್ಯ : ನಳೀನ್ ಕುಮಾರ್ ಕಟೀಲ್

ಇತ್ತೀಚೆಗೆ ಬಸವರಾಜ ಬೊಮ್ಮಾಯಿ ಅವರು , ಯಡಿಯೂರಪ್ಪನವರು ಹೆಚ್ಚು ದಿನಗಳ ಕಾಲ ಅಧಿಕಾರದಲ್ಲಿ ಉಳಿಯುವುದಿಲ್ಲ. ಹೈಕಮಾಂಡ್ ಗೂ ಅವರು ಸಾಕಾಗಿದ್ದಾರೆ. ಉತ್ತರ ಕರ್ನಾಟಕದವರು ಮುಂದಿನ ಸಿಎಂ ಆಗಲಿದ್ದಾರೆ ಎಂದು ಹೇಳುವ ಮೂಲಕ ಹಲವರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅವರ ಈ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ವಿರೋಧ ಆಕ್ರೋಶವೂ ವ್ಯಕ್ತವಾಗ್ತಿದೆ.
Basavaraja Bommayi
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel