ಬೆಂಗಳೂರು: ದೇಶ ವಿರೋಧಿ ಚಟುವಟಿಕೆಗಳ ವಿರುದ್ಧ NIA ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ. ರಾಜ್ಯದ ಗೃಹ ಇಲಾಖೆ ಇದಕ್ಕಾಗಿ ಎಲ್ಲ ರೀತಿಯ ಸಹಕಾರ ನೀಡಲಿದೆ ಎಂದು ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿರುವ ಅವರು ಡಿಜೆ ಹಳ್ಳಿ ಗಲಭೆಯಲ್ಲಿ ಎರಡು ಉಗ್ರ ಗುಂಪುಗಳ ಸಂಪರ್ಕ ಇರುವುದು ಎನ್ ಐಎ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ದೇಶದ ವಿರುದ್ಧ ಕೆಲಸ ಮಾಡ್ತಿರುವ ಶಕ್ತಿಗಳ ವಿರುದ್ಧ ಜಂಟಿ ಕಾರ್ಯಾಚರಣೆ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.
ಇನ್ನೂ ದೇಶದ ಸುರಕ್ಷತೆ ಆಂತರಿಕ ಸಮಸ್ಯೆ ಮತ್ತು ದೇಶದ ಗಡಿಯಾಚೆಗೆ ಇರುವ ಶಕ್ತಿಗಳು ಕೆಲಸ ಮಾಡುತ್ತಿದ್ದು ಅದರ ಮೇಲೆ ಜಂಟಿ ಕಾರ್ಯಾಚರಣೆ ಮಾಡುವುದು ಬಹಳ ಅವಶ್ಯಕವಾಗಿದೆ ಎಂದು ಬೊಮ್ಮಾಯಿ ಅವರು ಅಭಿಪ್ರಾಯ ಪಟ್ಟಿದ್ದಾರೆ.









