‘‘ಅಂತರರಾಜ್ಯ ಜಲವಿವಾದ ಕಾಯ್ದೆ ತಿದ್ದುಪಡಿ ಅಗತ್ಯ’’
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ
ಜಲ ಜೀವನ್ ಮಿಷನ್ ಸಮ್ಮೇಳನದಲ್ಲಿ ಸಿಎಂ ಮಾತು
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮ್ಮೇಳನ
ಹೆಚ್ಚು ಜನರಿಗೆ ನೀರು ಲಭ್ಯವಾಗಲು ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು – ಸಿಎಂ
ಬೆಂಗಳೂರು : ಜಲ ಜೀವನ್ ಮಿಷನ್ ಹಾಗೂ ಸ್ವಚ್ಛ ಭಾರತ್ ಮಿಷನ್ ಗ್ರಾಮಪಂಚಾಯತಿ ಯೋಜನೆಗಳ ಕುರಿತಂತೆ ವಿಧಾನಸೌಧದ ಸಭಾಂಗಣದಲ್ಲಿಂದು ಸಮ್ಮೇಳನ ನಡೆದಿದೆ.. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ಅವರು , ಅಂತರರಾಜ್ಯ ಜಲವಿವಾದ ಕಾಯ್ದೆಯನ್ನು ಸಂಪೂರ್ಣವಾಗಿ ತಿದ್ದುಪಡಿ ಮಾಡುವ ಅಗತ್ಯವಿದೆ ಎಂದು ತಿಳಿಸಿದ್ದಾರೆ..
ಹೌದು.. ಜಲ ವಿವಾದಗಳಿಗೆ ಸಂಬಂಧಿಸಿದಂತೆ ಸಂಕುಚಿತ ರಾಜಕಾರಣದ ಬದಲಿಗೆ ಹೆಚ್ಚು ಜನರಿಗೆ ನೀರು ಲಭ್ಯವಾಗಲು ಈ ಕಾಯ್ದೆಯಲ್ಲಿ ತಿದ್ದುಪಡಿ ತರಬೇಕು. ನದಿ ಪಾತ್ರಗಳ ಸೂಕ್ತ ನಿರ್ವಹಣೆಯಿಂದಲೇ ಇದಕ್ಕೆ ಪರಿಹಾರ ಸಾಧ್ಯ ಎಂದಿದ್ದಾರೆ.
ಇನ್ನೂ ಜನರಿಗೆ ಅಗತ್ಯ ನೀರು ಒದಗಿಸುವುದು ಸರ್ಕಾರದ ಕರ್ತವ್ಯ. ನೀರಿನ ವಿಚಾರದಲ್ಲಿ ಎಲ್ಲರೂ ಒಮ್ಮತದಿಂದ ಕಾರ್ಯನಿರ್ವಹಿಸಬೇಕು. ನೀರು ಸರಬರಾಜಿನ ಮೂಲಕ ಸುಸ್ಥಿರ ಜೀವನೋಪಾಯವನ್ನು ಕಲ್ಪಿಸಲು ಸಾಧ್ಯ ಎನ್ನುವುದು ನಮ್ಮ ಪ್ರಧಾನಿಗಳ ಗುರಿ. ಇದನ್ನು ಈಡೇರಿಸುವ ನಿಟ್ಟಿನಲ್ಲಿ ಒಟ್ಟಾಗಿ ಶ್ರಮಿಸಬೇಕು ಎಂದು ತಿಳಿಸಿದರು.