ಮೇಕೆದಾಟು ಯೋಜನೆಗೆ ಬೇರೆ ರಾಜ್ಯಗಳ ಅನುಮತಿ ಬೇಕಾಗಿಲ್ಲ : ಸಿಎಂ ಬೊಮ್ಮಾಯಿ
ಬೆಂಗಳೂರು: ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ತಮಿಳುನಾಡು ಸರ್ಕಾರ ತಕರಾರು ತೆಗೆದಿದೆ.. ಅಲ್ಲದೇ ಕಾವೇರಿ ಕೊಳ್ಳದ ರಾಜ್ಯಗಳ ಅನುಮತಿ ಪಡೆಯಬೇಕು ಎಂದು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಸೂಚನೆ ನೀಡಿರೋದು ಮೇಕೆ ದಾಟು ಯೋಜನೆಗೆ ಅಡಚಣೆ ಉಂಟುಮಾಡ್ತಿರುವ ರಾಜ್ಯಗಳ ವಾದಕ್ಕೆ ಬಲತುಂಬುವಂತಿದೆ.. ಆದ್ರೆ ಇದಕ್ಕೆ ರಾಜ್ಯ ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಡಿಯುವ ನೀರಿನ ಯೋಜನೆಗಳನ್ನು ಸ್ಥಾಪಿಸುವಾಗ ಯಾವುದೇ ರಾಜ್ಯಗಳ ಅನುಮತಿ ಪಡೆಯುವ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಆಂಧ್ರಪ್ರದೇಶದ ಯೋಜನೆಗಳಿಗೆ ಸಂಬಂಧಿಸಿದ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ, ಕುಡಿಯುವ ನೀರಿನ ಯೋಜನೆಗಳಿಗೆ ಅಂತಹ ಅನುಮತಿ ಅಗತ್ಯವಿಲ್ಲ. ನಾನು ಅದನ್ನು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರ ಗಮನಕ್ಕೆ ತಂದಿದ್ದೇನೆ ಎಂದು ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ.








