BBMP ಹಾಗು BDA ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು – ಸಿಎಂ ಬೊಮ್ಮಾಯಿ..
BBMP ಹಾಗೂ BDA ಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ್ ಹೇಳಿದ್ದಾರೆ.
ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ KRIDL ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು. “ಸರ್ಕಾರದ ಅಧೀನದ KRDIL ಸಂಸ್ಥೆ ಮುಖಾಂತರ ಇಂದು ಶಂಕುಸ್ಥಾಪನೆಗೊಂಡಿರುವ ವಾಣಿಜ್ಯ ಸಂಕೀರ್ಣದ ಮಾದರಿಯಲ್ಲಿಯೇ , ವಾಣಿಜ್ಯ ಚಟುವಟಿಕೆ ಹಾಗೂ ಸರ್ಕಾರಿ ಕಚೇರಿಗಳು ಕಾರ್ಯನಿರ್ವಹಿಸಲು ರಾಜ್ಯದ ಹಲವೆಡೆ ಕಟ್ಟಡಗಳ ನಿರ್ಮಾಣಕ್ಕೆ ತೀರ್ಮಾನವನ್ನು ಕೈಗೊಳ್ಳಲಾಗುವುದು” ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸಂಚಾರದಟ್ಟಣೆ ಸವಾಲು ಎದುರಿಸಲು ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. 12 ಹೈ DENSITY ರಸ್ತೆ ನಿರ್ಮಾಣಕ್ಕೆ 280 ಕೋಟಿ ರೂಪಾಯಿಗಳಿಗೆ ಮಂಜೂರಾತಿ ನೀಡಲಾಗಿದೆ. ಇವುಗಳು ದೇಶದ ವಿವಿಧ ಪ್ರಮುಖ ನಗರಗಳನ್ನು ಬೆಂಗಳೂರಿಗೆ ಸಂಪರ್ಕಿಸುವ ರಸ್ತೆಗಳಾಗಿವೆ. ನಗರೋತ್ಥಾನ ಯೋಜನೆಯಡಿ ರಸ್ತೆ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ಸುಮಾರು 8 ಸಾವಿರ ಕೋಟಿ ರೂಪಾಯಿಗಳನ್ನು ವಿವಿಧ ಯೋಜನೆಗಳಡಿ ನೀಡಲಾಗಿದೆ ಎಂದರು.
BBMP and BDA assets should be used for public service – CM Bommai..