ಬೊಮ್ಮನಹಳ್ಳಿಯ ಅಪಾರ್ಟ್ ಮೆಂಟ್ ಒಂದರಲ್ಲೇ 103 ಮಂದಿಗೆ ಪಾಸಿಟಿವ್ : ಬಿಬಿಎಂಪಿ
ಬೊಮ್ಮನಹಳ್ಳಿಯ ಒಂದೇ ಅಪರ್ಟ್ ಮೆಂಟ್ ನಲ್ಲಿ 103 ಜನರಿಗೆ ಕೊರೋನಾ ಸೋಂಕು ತಗುಲಿರುವುದು ಧೃಡವಾಗಿದೆ. ಅಪಾರ್ಟ್ ಮೆಂಟ್ ನಲ್ಲಿ ಒಟ್ಟು 1052 ಮಂದಿ ನಿವಾಸಿಗಳಿದ್ದು, ಇವರಲ್ಲಿ 96 ಮಂದಿ 60 ವರ್ಷಕ್ಕಿಂತ ಮೇಲ್ಪಟ್ಟವರಾಗಿದ್ದಾರೆ.
ಇನ್ನೂ ಬಿಬಿಎಂಪಿ ಆಯುಕ್ತ ಎನ್ ಮಂಜುನಾಥ್ ಪ್ರಸಾದ್ ಅಪಾರ್ಟ್ ಮೆಂಟ್ ನಿವಾಸಿಗಳ ಅಭಿವೃದ್ಧಿ ಸಂಘದ ಜೊತೆ ಸಭೆ ನಡೆಸಿದ್ದಾರೆ. ಕೋವಿಡ್ ಲಕ್ಷಣ ಇರುವವರಿಗೆ ಕ್ವಾರಂಟೈನ್ ಮಾಡುವಂತೆ ಆದೇಶ ನೀಡಿದ್ದಾರೆ. ಕೇರಳದಂತಹ ಹೆಚ್ಚು ಸೊಂಕು ಪ್ರದೇಶದಿಂದ ಬಂದವರ ಮೇಲೆ ನಿಗಾ ವಹಿಸುವಂತೆ ಮನವಿ ಮಾಡಿದ್ದಾರೆ.
FASTaag ಸ್ಕಾನ್ ಆಗದಕ್ಕೆ ದುಪಟ್ಟು ಹಣಕ್ಕೆ ಬೇಡಿಕೆ : ಲಾರಿ ಚಾಲಕರ ಗಲಾಟೆ
ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳದಿರುವ ನಿವಾಸಿಗಳು ಪ್ರತ್ಯೇಕವಾಗಿದ್ದು ಬಿಬಿಎಂಪಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಿದ್ದಾರೆ. ಇನ್ನೂ ಸೋಂಕಿನ ಲಕ್ಷಣ ಹೊಂದಿರುವವರು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ದಾಖಲಾಗಬೇಕು. ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಪಾಸಿಟಿವ್ ಬಂದು ಲಕ್ಷಣ ಹೊಂದಿಲ್ಲದಿರುವವರು 17 ದಿನಗಳ ಕಾಲ ಕಡ್ಡಾಯವಾಗಿ ಮನೆಯಲ್ಲಿ ಪ್ರತ್ಯೇಕವಾಗಿರುವಂತೆ ಸೂಚನೆ ನೀಡಲಾಗಿದೆ.