ಬೆಂಗಳೂರು : ರಾಜ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿನ ಆರ್ಭಟ ಹೆಚ್ಚಾಗಿದೆ. ಸೋಂಕು ನಿಯಂತ್ರಣ ಮಾಡಲು ಭಾನುವಾರ ಒಂದು ಲಾಕ್ ಡೌನ್ ಮಾಡುವ ತೀರ್ಮಾನಕ್ಕೆ ಸರ್ಕಾರ ಬಂದಿದೆ. ಕೊರೊನಾ ಸೋಂಕುನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಬೆಂಗಳೂರಿನ ವ್ಯಾಪ್ತಿಯಲ್ಲಿ ಮಂತ್ರಿಗಳ ಸೂಚನೆ ಮೇರೆಗೆ ಇಂದು ಸಂಜೆ 8 ರಿಂದ ಭಾನುವಾರ ಮುಂಜಾನೆ 5 ಗಂಟೆಯವರೆಗೆ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿದೆ. ಅಗತ್ಯ ಸೇವೆಗಳ ಮಾರಾಟಕ್ಕೆ ಮಾತ್ರ ಅವಕಾಸವಿರಲಿದೆ. ಈ ವೇಳೆ ಸಾರ್ವಜನಿಕರು ಅನಗತ್ಯವಾಗಿ ಓಡಾಡಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ವಾರ್ನಿಂಗ್ ಮಾಡಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲಿ ದಿನಸಿ ಅಂಗಡಿ, ಹಣ್ಣು-ತರಕಾರಿ ಅಂಗಡಿ, ಮಾಂಸದಂಗಡಿ, ಔಷಧಿ ಮಳಿಗೆಗಳು ತೆರೆದಿರುತ್ತವೆ. ಈ ಅವಧಿಯಲ್ಲಿ ಸಾರ್ವಜನಿಕರು ಹೊರಗಡೆ ಓಡಾಟ ನಡೆಸಬೇಕಾದರೆ ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು. ಸಾರ್ವಜನಿಕರು ಬಿಬಿಎಂಪಿ, ಪೊಲೀಸ್, ಆರೋಗ್ಯಾಧಿಕಾರಿಗಳಿಗೆ ಸಹಕಾರ ನೀಡಬೇಕು. ಸಾರ್ವಜನಿಕರು ಅನಗತ್ಯವಾಗಿ ಓಡಾಟ ಮಾಡಿದರೆ ಪೊಲೀಸ್ ಅಧಿಕಾರಿಗಳು ಅಂತಹವರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಲಿದ್ದಾರೆ. ಈ ಲಾಕ್ ಡೌನ್ ಅನ್ನು ಯಶಸ್ವಿಯಾಗಲು ಎಲ್ಲರೂ ಸಹಕರಿಸುವ ಮೂಲಕ ಕೋವಿಡ್-19 ಸೋಂಕು ಹರಡುವಿಕೆಯನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.








