BBMP ಬಿಜೆಪಿಯ ಭ್ರಷ್ಟಾಚಾರಕ್ಕೆ ಹೆಡ್ ಆಫೀಸ್
ಬೆಂಗಳೂರು : ಬಿಬಿಎಂಪಿ ಬಿಜೆಪಿಯ ಭ್ರಷ್ಟಾಚಾರಕ್ಕೆ ಹೆಡ್ ಆಫೀಸ್ ಆಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ಜನಸ್ಪಂದನಾ ಕಾರ್ಯಕ್ರಮದ ಬಗ್ಗೆ ವಿಪಕ್ಷ ಸಿದ್ದರಾಮಯ್ಯ ಟ್ವಿಟ್ಟರ್ ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಬಿಬಿಎಂಪಿ ಬಿಜೆಪಿಯ ಭ್ರಷ್ಟಾಚಾರಕ್ಕೆ ಹೆಡ್ ಆಫೀಸ್ ಆಗಿದೆ. ರಾಜಕಾಲುವೆ, ರಸ್ತೆ, ಮೂಲಭೂತ ಸೌಕರ್ಯ, ಘನತ್ಯಾಜ್ಯ ನಿರ್ವಹಣೆಯಲ್ಲಿ ಭ್ರಷ್ಟಾಚಾರ ನಡೆದಿರುವುದನ್ನು ವಾರ್ಷಿಕ ಲೆಕ್ಕ ಪರಿಶೋಧನಾ ವರದಿ ಹೇಳಿದೆ. ನಗರದ ಜನರ ಸ್ಪಂದನ ಕೇಳಿ.
ಕೋವಿಡ್ ನಿಯಂತ್ರಣ ಸಂಬಂಧ ಮಾಡಿದ ಎಲ್ಲ ಖರೀದಿಗಳ ಬಗೆಗಿನ ದಾಖಲೆಗಳನ್ನು 24 ಗಂಟೆಗಳಲ್ಲಿ ಸಾರ್ವಜನಿಕಗೊಳಿಸುತ್ತೇನೆ ಎಂದು ಕಳೆದ ಜುಲೈ 21 ರಂದು ಹಿಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದರು. ಎಲ್ಲಿದೆ ದಾಖಲೆ ಬಿಜೆಪಿ?
ಅಂಗನವಾಡಿ ಮಕ್ಕಳ ಪಾಲಿನ ಮೊಟ್ಟೆಯ ಹಣದಲ್ಲೂ ಭ್ರಷ್ಟಾಚಾರ. ಆರೋಪ ಹೊತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾಜೊಲ್ಲೆ ಮೇಲೆ ಯಾವ ಕ್ರಮವೂ ಇಲ್ಲ. ಬದಲಿಗೆ ಮಕ್ಕಳಿಗೆ ಕೊಡುವ ಮೊಟ್ಟೆಯನ್ನೇ ನಿಲ್ಲಿಸಲು @BJP4Karnataka ಹುನ್ನಾರ ನಡೆಸುತ್ತಿದೆ. 19/23#ಜನಮರ್ದನ #ಭ್ರಷ್ಟೋತ್ಸವ
— Siddaramaiah (@siddaramaiah) September 10, 2022
ಬೆಂಗಳೂರು ನಗರದ ಆಸ್ಪತ್ರೆಗಳಲ್ಲಿ ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಬಿಜೆಪಿ ಶಾಸಕರೇ ಭಾಗಿ ಆಗಿದ್ದು ಬಯಲಾಯಿತು. ಕೆಲವು ಪೊಲೀಸರನ್ನು ಬಂಧಿಸಿದ್ದು ಬಿಟ್ಟರೆ ದಂಧೆ ಹಿಂದಿರುವ ದೊಡ್ಡ ತಲೆಗಳೆಲ್ಲ ದೋಸೆ ತಿನ್ನುತ್ತಾ ಆರಾಮಾಗಿ ಇವೆ.
ಅಂಗನವಾಡಿ ಮಕ್ಕಳ ಪಾಲಿನ ಮೊಟ್ಟೆಯ ಹಣದಲ್ಲೂ ಭ್ರಷ್ಟಾಚಾರ. ಆರೋಪ ಹೊತ್ತ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾಜೊಲ್ಲೆ ಮೇಲೆ ಯಾವ ಕ್ರಮವೂ ಇಲ್ಲ. ಬದಲಿಗೆ ಮಕ್ಕಳಿಗೆ ಕೊಡುವ ಮೊಟ್ಟೆಯನ್ನೇ ನಿಲ್ಲಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ ಎಂದು ಸಿದ್ದರಾಮಯ್ಯ ದೂರಿದ್ದಾರೆ.