ಹೊಸಗುಡ್ಡದಹಳ್ಳಿ ಅವಘಡಕ್ಕೆ ಬಿಬಿಎಂಪಿಯೇ ನೇರ ಹೊಣೆ
ಬೆಂಗಳೂರು : ಹೊಸಗುಡ್ಡದಹಳ್ಳಿ ಅವಘಡ ನಡೆಯಲು ಬಿಬಿಎಂಪಿಯೇ ನೇರ ಹೊಣೆ ಎಂದು ಆಮ್ ಆದ್ಮಿ ಪಕ್ಷದ ಮುಖ್ಯ ವಕ್ತಾರ ಶರತ್ ಖಾದ್ರಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಬಿಬಿಎಂಪಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜನವಸತಿ ಪ್ರದೇಶದಲ್ಲಿ ಉದ್ದಿಮೆಗಳು ಕಾರ್ಯನಿರ್ವಹಿಸುತ್ತಿವೆ.
ಇಂತಹ ಉದ್ದಿಮೆಗಳಿಂದ ಅಧಿಕಾರಿಗಳು ಕೋಟ್ಯಂತರ ರೂ. ವಸೂಲಿ ಮಾಡುವ ಸಲುವಾಗಿ ಉದ್ದೇಶ ಪೂರ್ವಕವಾಗಿ ಉದ್ದಿಮೆ ಪರವಾನಗಿ ನೀಡುತ್ತಿಲ್ಲ.
ಹೊಸಗುಡ್ಡದಹಳ್ಳಿ ಅವಘಡ ನಡೆಯಲು ಬಿಬಿಎಂಪಿಯೇ ನೇರ ಹೊಣೆ. ಬೆಂಕಿ ಅವಘಡದಿಂದಾಗಿ ನೂರಾರು ಕುಟುಂಬಗಳು ಬೀದಿಪಾಲಾಗಿವೆ. ಆದರೆ, ಇದುವರೆಗೂ ಆ ಕುಟುಂಬಗಳಿಗೆ ಪುರ್ನವಸತಿ ಕಲ್ಪಿಸಿಲ್ಲ ಎಂದು ಆಕ್ರೋಶ ಹೊರಹಾಕಿದರು.
ಇನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸ್ಥಳೀಯ ಶಾಸಕ ಕೃಷ್ಣಪ್ಪ ನಾಮಕೇವಾಸ್ತೆಗೆ ಬಂದು ಕೈ ಬೀಸಿ ಹೋಗಿದ್ದು, ಬಿಟ್ಟರೆ ಜನರ ಕಷ್ಟ ಕೇಳಿಲ್ಲ.
ಗೋಕಾಕ್ ನ ಗಟ್ಟಿ ಬಸವಣ್ಣ ಕುಡಿಯುವ ನೀರಿನ ಯೋಜನೆಗೆ ಸಚಿವ ಸಂಪುಟ ಅನುಮೋದನೆ
ಇಂತಹ ನಾಲಾಯಕ್ ಜನ ನಾಯಕರಿಗೆ ನಾಚಿಕೆ ಆಗಬೇಕು. ಜನರನ್ನು ನಡುಬೀದಿಯಲ್ಲಿ ಮಲಗಿಸಿದ ಇವರಿಗೆ ಮಾನವೀಯತೆ ಇದೆಯೇ ಎಂದು ಶರತ್ ಖಾದ್ರಿ ಪ್ರಶ್ನಿಸಿದರು.
ಆನ್ಲೈನ್ ಮೂಲಕ ಉದ್ದಿಮೆ ಪರವಾನಗಿ ನೀಡಲಾಗುವುದು ಎಂದು ಮಾಧ್ಯಮಗಳ ಮುಂದೆ ಸುಳ್ಳು ಹೇಳಿದ್ದ ಆಯುಕ್ತ ಮಂಜುನಾಥ್ ಪ್ರಸಾದ್ ಅವರು ತಮ್ಮ ಕೆಳಗಿನ ಅಧಿಕಾರಿಗಳನ್ನು ರಕ್ಷಿಸುತ್ತಿದ್ದಾರೆ ಎಂದು ಆರೋಪಿಸಿದ ಶರತ್ ಖಾದ್ರಿ, ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸುವ ವ್ಯವಸ್ಥೆ ಹಾಳುಗೆಡವಿ, ಉದ್ದಿಮೆದಾರರನ್ನು ಕಚೇರಿಗೆ ಕರೆಸಿ ನವೀಕರಣದ ಹೆಸರಿನಲ್ಲಿ ಹಣ ಕೀಳಲಾಗುತ್ತಿದೆ. ಈ ಘೋರ ದುರಂತಕ್ಕೆ ಎಲ್ಲ ಮಾಜಿ ಮೇಯರ್ಗಳು, ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರು ಕಾರಣ ಎಂದು ದೂರಿದರು.
ಬೆಂಗಳೂರಿನಲ್ಲಿ ಉದ್ದಿಮೆ ತೆರೆಯುವುದು ಇನ್ನು ಸುಲಭ ಎಂದು ಹೇಳಿದ್ದ ಬಿಬಿಎಂಪಿ ಹಿಂಬಾಗಿಲ ಮೂಲಕ ಉದ್ದಿಮೆದಾರರಿಂದ ಹಣ ದೋಚುತ್ತಿದೆ.
ಜನವಸತಿ ಪ್ರದೇಶಗಳಲ್ಲಿ ಕೈಗಾರಿಕೆಗಳನ್ನು ಪ್ರಾರಂಭಿಸಿದರೂ ಸರಿಯಾಗಿ ಪರಿಶೀಲಿಸದೇ ಜನಸಾಮಾನ್ಯರ ಜೀವದ ಜತೆ ಚೆಲ್ಲಾಟವಾಡುತ್ತಿದೆ.
ಈ ಎಲ್ಲ ಅವಘಡಗಳ ಹಿಂದೆ ಬಿಬಿಎಂಪಿಯ ಸಾರ್ವಜನಿಕ ಆರೋಗ್ಯ ಅಧಿಕಾರಿಗಳ ವ್ಯಾಪಕ ಅವ್ಯವಹಾರ ಇದೆ. ಪರವಾನಗಿ ನೀಡುವುದೇ ದಂದೆಯಾಗಿ ಮಾರ್ಪಟ್ಟಿದೆ.
10..100ವರ್ಷ ಅಲ್ಲ, ಜೀವಿ ಇರೋತನಕ ಬಿಜೆಪಿ ಅಧಿಕಾರ ಮಾಡ್ಲಿ: ಕಟೀಲ್ಗೆ ಡಿಕೆಶಿ ಡಿಚ್ಚಿ..!
ಅಂದಾಜಿನ ಪ್ರಕಾರ ನಗರದಲ್ಲಿ 5 ಲಕ್ಷ ಪರವಾನಗಿ ಪಡೆಯದ ಉದ್ದಿಮೆಗಳಿದ್ದು, ಇವುಗಳಿಂದ ಎಲ್ಲ ರೀತಿಯ ಅಧಿಕಾರಿಗಳು ಕೋಟ್ಯಂತರ ರೂ. ವಸೂಲಿ ಮಾಡುತ್ತಿದ್ದಾರೆ.
ಲಕ್ಷಾಂತರ ಕುಟುಂಬಗಳಿಗೆ ಉದ್ಯೋಗ ನೀಡುತ್ತಿರುವ ಉದ್ದಿಮೆದಾರರಿಗೆ ಕಿರುಕುಳ ತಪ್ಪಿಸಬೇಕು. ಬೆಂಕಿ ಅವಘಡದಿಂದ ನಷ್ಟ ಅನುಭವಿಸಿರುವ ಸಂತ್ರಸ್ತರಿಗೆ ಸೂಕ್ತ ಪರಿಹಾರ, ವಾಸಿಸಲು ಮನೆ ನೀಡಬೇಕು ಎಂದು ಶರತ್ ಖಾದ್ರಿ ಆಗ್ರಹಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel