ADVERTISEMENT
Friday, September 18, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಕೊರೊನಾ ರೋಗಿಗಳಿಗೆ ಬೆಡ್ ಕೊಡದ 7 ಆಸ್ಪತ್ರೆಗಳಿಗೆ ಬಿಬಿಎಂಪಿ ಶೋಕಾಸ್ ನೋಟಿಸ್…!

Kariyappa N by Kariyappa N
October 31, 2020
in Newsbeat, Samagra karnataka, ರಾಜ್ಯ
Share on FacebookShare on TwitterShare on WhatsappShare on Telegram

ಬೆಂಗಳೂರು: ಕೊರೊನಾ ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ನೀಡದೇ ಸತಾಯಿಸಿದ 7 ಆಸ್ಪತ್ರೆಗೆಳಿಗೆ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಶೋಕಾಸ್ ನೋಟಿಸ್ ನೀಡಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಪ್ರತಿದಿನ ಸಾವಿರ ಸಾವಿರ ಸಂಖ್ಯೆಯಲ್ಲಿ ಏರುತ್ತಿದ್ದ ದಿನಗಳಲ್ಲಿ ಆಸ್ಪತ್ರೆಗಳಲ್ಲಿ ಬೆಡ್ ಸಿಗದೆ ಸಕಾಲಕ್ಕೆ ಚಿಕಿತ್ಸೆ ಸಿಗದ ಪರಿಣಾಮ ನೂರಾರು ಕೊರೊನಾ ಸೋಂಕಿತರು ಮೃತಪಟ್ಟಿದ್ದರು. ಇದನ್ನು ತಪ್ಪಿಸಲು ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಹಾಗೂ ಮೆಡಿಕಲ್ ಕಾಲೇಜುಗಳ ಜತೆ ಮತುಕತೆ ನಡೆಸಿದ್ದ ಸರ್ಕಾರ, ಶೇ.50ರಷ್ಟು ಹಾಸಿಗೆಗಳನ್ನು ಬಿಬಿಎಂಪಿಗೆ ನೀಡುವಂತೆ ಅದೇಶ ಹೊರಡಿಸಿತ್ತು. ಸರ್ಕಾರ ಆದೇಶ ಬಂದು ನಾಲ್ಕೈದು ತಿಂಗಳು ಕಳೆದರೂ ಸರ್ಕಾರದ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತು ನೀಡದ ಖಾಸಗಿ ಆಸ್ಪತ್ರೆಗಳು ಒಂದೇ ಒಂದು ಹಾಸಿಗೆಯನ್ನೂ ಬಿಟ್ಟುಕೊಟ್ಟಿಲ್ಲ.

bbmp noticenotice
ಈ ಹಿನ್ನೆಲೆಯಲ್ಲಿ 24 ಗಂಟೆಯೊಳಗೆ ಉತ್ತರ ನೀಡುವಂತೆ ಕಾರಣ ಕೇಳಿ ಕೆಪಿಎಂಇ ಕಾಯ್ದೆ(ಕರ್ನಾಟಕ ಖಾಸಗಿ ವೈದದ್ಯಕೀಯ ಸಂಸ್ಥೆಗಳ ಕಾಯ್ದೆ) ಅಡಿ ಬಿಬಿಎಪಿ ಆಯುಕ್ತ ಮಂಜುನಾಥ್ ಪ್ರಸಾದ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

Related posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

September 18, 2026
kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

September 18, 2026

ಯಾವ ಆಸ್ಪತ್ರೆಗಳಿಗೆ ನೋಟಿಸ್..?
1.ಆರ್ಥೆಯಮ್ ಆಸ್ಪತ್ರೆ
2. ರಂಗದೊರೈ ಮೆಮೋರಿಯಲ್ ಆಸ್ಪತ್ರೆ
3. ಸಂಜೀವಿನಿ ಆಸ್ಪತ್ರೆ
4. ಡಾ.ಜಿವಿಜಿ ಹೆಲ್ತ್‍ಕೇರ್ ಲಿಮಿಟೆಡ್
5. ಶ್ರೀನಿವಾಸ್ ಅಸ್ಪತ್ರೆ
6. ಮೆಡ್‍ಸ್ಟಾರ್ ಆಸ್ಪತ್ರೆ
7. ನಂದನ ಹೆಲ್ತ್‍ಕೇರ್
ಈ ಆಸ್ಪತ್ರೆಗಳು ಕೋವಿಡ್-19 ಸೋಂಕಿತರಿಗೆ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಟ್ಟಿಲ್ಲ. ಮೀಸಲಿಟ್ಟ ಹಾಸಿಗೆಗಳನ್ನು ಬಿಬಿಎಂಪಿಗೆ ನೀಡಿಲ್ಲ. ಜತೆಗೆ ಬಿಬಿಎಂಪಿ ಸೂಚಿಸಿದ ಕೊರೊನಾ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಿಕೊಳ್ಳದೆ ಆದೇಶ ಉಲ್ಲಂಘಿಸಿವೆ. ಸರ್ಕಾರ ಹಾಗೂ ಬಿಬಿಎಂಪಿ ಆದೇಶದ ಪ್ರಕಾರ ಖಾಸಗಿ ಆಸ್ಪತ್ರೆಗಳು ತಮ್ಮ ಬಳಿ ಇರುವ ಹೆಚ್‍ಡಿಯು, ಐಸಿಯು, ವೆಂಟಿಲೇಟರ್ ಸಹಿತ ಐಸಿಯುಗಳನ್ನು ಕೊರೊನಾ ಸೋಂಕಿತರಿಗೆ ಮೊದಲ ಆದ್ಯತೆಯಾಗಿ ನೀಡಬೇಕಿತ್ತು. ಆದರೆ, ಈ ಆದೇಶಕ್ಕೆ ಕಿಮ್ಮತ್ತು ನೀಡದ ಆಸ್ಪತ್ರೆಗಳು, ತಮಗೂ, ಬಿಬಿಎಂಪಿಗೂ ಸಂಬಂಧವೇ ಇಲ್ಲ ಎಂಬಂತೆ ವರ್ತಿಸಿವೆ. ಹೀಗಾಗಿ ಈ ಆಸ್ಪತ್ರೆಗಳಿಗೆ ಕಡಿವಾಣ ಹಾಕಲು ಈಗ ಬಿಬಿಎಂಪಿ ಹೊರಟಿದೆ.

ಆಸ್ಪತ್ರೆ ಲೈಸೆನ್ಸ್ ಕ್ಯಾನ್ಸಲ್..
ಬಿಬಿಎಂಪಿ ನೀಡಿದ ಶೋಕಾಸ್ ನೋಟಿಸ್‍ಗೆ 7 ಆಸ್ಪತ್ರೆಗಳು 24 ಗಂಟೆಯೊಳಗೆ ತಪ್ಪದೆ ಉತ್ತರ ನೀಡಬೇಕು. ಕೆಪಿಎಂಇ ಕಾಯ್ದೆಯಡಿ ನೀಡಿರುವ ನೋಟಿಸ್‍ಗೆ ಉತ್ತರ ನೀಡದೇ ಇದ್ದರೆ ಅಂತಹ ಆಸ್ಪತ್ರೆಗಳ ಲೈಸೆನ್ಸ್ ರದ್ದು ಮಾಡುವುದಾಗಿ ಬಿಬಿಎಂಪಿ ಎಚ್ಚರಿಕೆ ನೀಡಿದೆ.

hospitals
ಒಂದು ವೇಳೆ ಈ ಖಾಸಗಿ ಆಸ್ಪತ್ರೆಗಳ ಉತ್ತರ ಸಮರ್ಪಕವಾಗಿ ಇರದೇ ಇದ್ದರೆ ಲೈಸೆನ್ಸ್ ರದ್ದು ಮಾಡಲಾಗುವುದು. ಮೊದಲು ಒಪಿಡಿ ಬಂದ್ ಮಾಡುತ್ತೇವೆ, ನಂತರ ಈ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆಂದು ದಾಖಲಾಗಿರುವ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಶಿಫ್ಟ್ ಮಾಡುತ್ತೇವೆ. ರೋಗಿಗಳ ಸ್ಥಳಾಂತರ ಮುಗಿಯುತ್ತಿದ್ದಂತೆ ಆಸ್ಪತ್ರೆಗಳಿಗೆ ಬೀಗಮುದ್ರೆ ಹಾಕುವುದಾಗಿ ಬಿಬಿಎಂಪಿ ಆಯುಕ್ತರು ಶೋಕಾಸ್ ನೋಟಿಸ್‍ನಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಿದ್ದಾರೆ.
ಎರಡು ತಿಂಗಳ ಹಿಂದೆಯೂ ಕೊರೊನಾ ರೋಗಿಗಳಿಗೆ ಹಾಸಿಗೆ ಕೊಡದ ಕೆಲ ಖಾಸಗಿ ಆಸ್ಪತ್ರೆಗಳಿಗೆ ಬಿಬಿಎಂಪಿ ನೋಟಿಸ್ ನೀಡಿತ್ತು. ಆದ್ರೆ ಅಂತಹ ಆಸ್ಪತ್ರೆ ವಿರುದ್ಧ ಬಿಬಿಎಂಪಿ ಕಠಿಣ ಕ್ರಮಕೈಗೊಂಡ ಯಾವುದೇ ಉದಾಹರಣೆಗಳು ಇಲ್ಲ. ಹೀಗಾಗಿ ಈಗಲೂ ಕೇವಲ ನೆಪಮಾತ್ರಕ್ಕೆ ನೋಟಿಸ್ ನೀಡಿದೆಯೋ, ಖಾಸಗಿ ಆಸ್ಪತ್ರೆಗಳ ವಿರುದ್ಧ ಬಿಬಿಎಂಪಿ ಕಠಿಣ ಕ್ರಮ ಕೈಗೊಳ್ಳುತ್ತದೆಯೋ ಎಂಬುದನ್ನು ಕಾದು ನೋಡಬೇಕಿದೆ.

Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel

Tags: bangaloreBBMPCoronakovid-19 patientsprivate hospitalsshowcause notice
ShareTweetSendShare
Join us on:

Related Posts

shivarajkumar-kurmavathara-movie-teaser-released-dil-raju-saikumar

ಹ್ಯಾಟ್ರಿಕ್ ಹೀರೋʼ ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ’ ಚಿತ್ರದ ಭರ್ಜರಿ ಟೀಸರ್ ಬಿಡುಗಡೆ

by admin
September 18, 2026
0

'ಹ್ಯಾಟ್ರಿಕ್ ಹೀರೋ' ಶಿವರಾಜ್‌ಕುಮಾರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ ಬಹುನಿರೀಕ್ಷಿತ ಬಹುಭಾಷಾ ಚಿತ್ರ ‘ಕೂರ್ಮಾವತಾರ’ದ ಟೀಸರ್ ಅದ್ಧೂರಿಯಾಗಿ ಲೋಕಾರ್ಪಣೆಗೊಂಡಿದೆ. ನರೇಂದ್ರ ಕೊಂಡ ಅರ್ಪಿಸುವ, ಪಂಚವಕ್ತ್ರ ಪಿಕ್ಚರ್ಸ್ ಹಾಗೂ ರುಕ್ವಿನಾ...

kiccha-sudeep-billa-ranga-baasha-brb-special-poster-released-birthday

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ ‘ಬಿಲ್ಲ ರಂಗ ಬಾಷಾ’ (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್

by admin
September 18, 2026
0

ಅಭಿನಯ ಚಕ್ರವರ್ತಿʼ ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಪ್ರಯುಕ್ತ ಬಹುನಿರೀಕ್ಷಿತ 'ಬಿಲ್ಲ ರಂಗ ಬಾಷಾ' (BRB) ಚಿತ್ರದ ಸ್ಪೆಷಲ್ ಪೋಸ್ಟರ್ ರಿಲೀಸ್ ಆಗಿದೆ. ಬ್ಲಾಕ್‌ಬಸ್ಟರ್ 'ವಿಕ್ರಾಂತ್ ರೋಣ'...

kiccha-sudeep-p-samuthirakani-school-bus-movie-first-look-released

ಪಿ. ಸಮುದ್ರಖನಿ ನಿರ್ದೇಶನದ ‘ಸ್ಕೂಲ್ ಬಸ್’ ಚಿತ್ರದಲ್ಲಿ ಕಿಚ್ಚ ಸುದೀಪ್ ಪ್ರಮುಖ ಪಾತ್ರ: ಬಹುಭಾಷೆಗಳಲ್ಲಿ ಸಿನಿಮಾ ರಿಲೀಸ್

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಖ್ಯಾತ ತಮಿಳು ನಿರ್ದೇಶಕ ಹಾಗೂ ನಟ ಪಿ. ಸಮುದ್ರಖನಿ ಅವರ ಮುಂಬರುವ ‘ಸ್ಕೂಲ್ ಬಸ್’ ಚಿತ್ರದಲ್ಲಿ ಪ್ರಮುಖ ಪಾತ್ರವೊಂದರಲ್ಲಿ...

kiccha-sudeep-devaraya-movie-announcement-birthday-gift-peoples-media-factory

ʻಕಿಚ್ಚʼ ಸುದೀಪ್ ಜನ್ಮದಿನಕ್ಕೆ ಭರ್ಜರಿ ಗಿಫ್ಟ್: ‘ದೇವರಾಯ’ನಾಗಿ ಅಬ್ಬರಿಸಲಿದ್ದಾರೆ ಅಭಿನಯ ಚಕ್ರವರ್ತಿ

by admin
September 18, 2026
0

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಜನ್ಮದಿನದ (ಸೆಪ್ಟೆಂಬರ್ 2) ಸಂಭ್ರಮದಲ್ಲಿರುವ ಕೋಟ್ಯಂತರ ಅಭಿಮಾನಿಗಳಿಗೆ ಅದ್ಭುತ ಉಡುಗೊರೆ ದೊರೆತಿದೆ. ಸುದೀಪ್ ಅವರ ಮುಂದಿನ ಬಹುನಿರೀಕ್ಷಿತ ಹಾಗೂ...

kamal-haasan-su-arun-kumar-new-movie-look-test-viral

ಕಮಲ್ ಹಾಸನ್ – ಎಸ್.ಯು. ಅರುಣ್ ಕುಮಾರ್ ಕಾಂಬಿನೇಷನ್‌ನಲ್ಲಿ ಹೊಸ ಸಿನಿಮಾ; ವೈರಲ್ ಆಯ್ತು ಲುಕ್ ಟೆಸ್ಟ್!

by admin
September 18, 2026
0

ಕಮಲ್ ಹಾಸನ್ ಅವರ ಮುಂಬರುವ ಹೊಸ ಚಿತ್ರದ ಲುಕ್ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಅಭಿಮಾನಿಗಳಲ್ಲಿ ತೀವ್ರ ಕುತೂಹಲ ಹುಟ್ಟುಹಾಕಿದೆ. ಕಮಲ್ ಹಾಸನ್ ಮುಖ್ಯಭೂಮಿಕೆಯಲ್ಲಿರುವ ಈ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram