ಬೆಂಗಳೂರು : ಬಿಬಿಎಂಪಿ ವ್ಯಾಪ್ತಿಯ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಗಿದೆ. ಪರೀಕ್ಷೆಗೆ ಹಾಜರಾಗುವ ಹಿನ್ನೆಲೆಯಲ್ಲಿ ಕೋವಿಡ್-19 ಮುಂಜಾಗ್ರತಾ ಕ್ರಮವಾಗಿ ಭಾರತ್ ಸ್ಕೌಟ್ಸ್ ಅಂಡ್ ಗೌಡ್ಸ್ ಬಿಬಿಎಂಪಿ ಜಿಲ್ಲಾ ಸಂಸ್ಥೆ ವತಿಯಿಂದ ಪಾಲಿಕೆ ವ್ಯಾಪ್ತಿಯ ಎಲ್ಲಾ ಶಾಲಾ/ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಸ್ಕ್ ವಿತರಣೆ ಮಾಡಲಾಯಿತು. ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಇಂದು ಸಾಂಕೇತಿಕವಾಗಿ ಕ್ಲೀವ್ ಲ್ಯಾಂಡ್ ಟೌನ್ ವಿದ್ಯಾರ್ಥಿನಿಯರಿಗೆ ಮಾಸ್ಕ್ ಗಳನ್ನು ವಿತರಿಸಿದರು. ಈ ವೇಳೆ ವಿಶೇಷ ಆಯುಕ್ತ ರಂದೀಪ್, ಕ್ಲೀವ್ ಲ್ಯಾಂಡ್ ಟೌನ್ ಪದವಿ ಕಾಲೇಜು ಪ್ರಾಂಶುಪಾಲು ಆನಂದ್, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ನೋಡಲ್ ಅಧಿಕಾರಿ ಚೆಲ್ಲಯ್ಯ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.









