ಸಿಎಂ ಬಿಎಸ್ ವೈ ವಿರುದ್ಧ ದೂರು ಸಲ್ಲಿಸಿದ ಈಶ್ವರಪ್ಪ ನಡೆ ವಿರುದ್ಧ ಬಿ.ಸಿ ಪಾಟೀಲ್ ಬೇಸರ..!
ಬೆಂಗಳೂರು : ಸಿಎಂ ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ಸಚಿವ ಕೆ ಎಸ್ ಈಶ್ವರಪ್ಪ ದೂರು ಸಲ್ಲಿಕೆ ಮಾಡಿರುವ ಹಿನ್ನೆಲೆ ಈಶ್ವರಪ್ಪ ನಡೆ ವಿರುದ್ಧ ಸಚಿವ ಬಿ ಸಿ ಪಾಟೀಲ್ ಬೇಸರ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಬಿ ಸಿ ಪಾಟೀಲ್ ಈಶ್ವರಪ್ಪ ಅವರು ಸಿಎಂ ವಿರುದ್ಧ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿರುವುದು ಸರಿಯಾದ ಕ್ರಮ ಅಲ್ಲ. ಯಾವುದೇ ವಿಷಯಗಳು ಇದ್ದರೂ ಕೂಡ ಅದನ್ನು ಸಂಪುಟ ಸಭೆಯಲ್ಲಿ ಚರ್ಚಿಸಲು ಅವಕಾಶವಿದೆ.
ಹೀಗಿದ್ದರೂ ಕೂಡ ಸಂಪುಟ ಸಭೆಯಲ್ಲಿ ಯಾವುದೇ ವಿಷಯವನ್ನು ಈಶ್ವರಪ್ಪನವರು ಪ್ರಸ್ತಾಪ ಮಾಡದೆ ಈ ರೀತಿ ನೇರವಾಗಿ ಏಕಾಏಕಿ ರಾಜ್ಯಪಾಲರಿಗೆ ದೂರು ಸಲ್ಲಿಸುವುದು ಹಿರಿಯರಾದ ಈಶ್ವರಪ್ಪನವರಿಗೆ ಶೋಭೆ ತರುವಂತಹದ್ದಲ್ಲ. ಯಾವುದೇ ತಪ್ಪನ್ನು ಮಾಡದ ಯಡಿಯೂರಪ್ಪ ಅವರು ತಪ್ಪು ಮಾಡಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ದೂರು ನೀಡಿರುವುದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.