15 – 18 ವರ್ಷದ ಮಕ್ಕಳ ಲಸಿಕೆ ಅಭಿಯಾನಕ್ಕೆ ಚಾಲನೆ
ಹಾವೇರಿ : ಮುಖ್ಯಮಂತ್ರಿಗಳ ಸೂಚನೆಯಂತೆ ಕೃಷಿ ಸಚಿವರೂ ಆಗಿರುವ ಹಾವೇರಿ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲರಿಂದು ಮತಕ್ಷೇತ್ರ ಹಿರೇಕೆರೂರಿನ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 15 ರಿಂದ 18 ವರ್ಷದ ಮಕ್ಕಳ ಕೋವಿಡ್-19 ಲಸಿಕಾಕರಣಕ್ಕೆ ಚಾಲನೆ ನೀಡಿ, ಮಕ್ಕಳಿಗೆ ಕೋವಿಡ್ ಸೋಂಕಿನ ಕುರಿತು ಜಾಗೃತಿ ಮೂಡಿಸಿದರು. ಅಲ್ಲದೇ ತಪ್ಪದೇ ಎಲ್ಲರೂ ಕೋವಿಡ್ -19 ಲಸಿಕೆ ಕಡ್ಡಾಯವಾಗಿ ಪಡೆದುಕೊಳ್ಳಬೇಕೆಂದು ಕರೆ ನೀಡಿದರು.
ಇದೇ ವೇಳೆ ರಾಮನಗರ ಜಿಲ್ಲೆಯಲ್ಲಿ ಮುಖ್ಯಮಂತ್ರಿಗಳ ಎದುರಲ್ಲೇ ಕಾಂಗ್ರೆಸ್ಸಿನ ಸಂಸದರಾದ ಡಿಕೆ ಸುರೇಶ್ ಮತ್ತು ವಿಧಾನಪರಿಷತ್ ಸದಸ್ಯರಾದ ಎಸ್. ರವಿ ಅವರು ಸಚಿವರಾದ ಡಾ.ಅಶ್ವತ್ಥನಾರಾಯಣ ಅವರ ಮೇಲೆ ಹಲ್ಲೆಗೆ ಯತ್ನಿಸಿ, ಮೈಕ್ ಕಸಿದು, ತಳ್ಳಾಟ ನಡೆಸಿ ಅಮಾನವೀಯವಾಗಿ ವರ್ತಿಸಿದ್ದಲ್ಲದೆ ಅಸಭ್ಯ ಹಾಗೂ ಗೂಂಡಾ ವರ್ತನೆ ತೋರಿದ್ದು ಖಂಡನೀಯ ಎಂದರು.