ಕೋವಿಡ್ 19 ಮೂರನೆ ಅಲೆ ಎದುರಿಸಲು ತಾಲ್ಲೂಕು ಆಡಳಿತ ಸಜ್ಜು- ಬಿ.ಸಿ. ಪಾಟೀಲ್

1 min read

ಕೋವಿಡ್ 19 ಮೂರನೆ ಅಲೆ ಎದುರಿಸಲು ತಾಲ್ಲೂಕು ಆಡಳಿತ ಸಜ್ಜು- ಬಿ.ಸಿ. ಪಾಟೀಲ್
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳಿಗೆ ಸೂಚನೆ

ಬಿ.ಸಿ .ಪಾಟೀಲ್ ಕೃಷಿ ಸಚಿವರು ಕರ್ನಾಟಕ ಸರ್ಕಾರ ಇವರು ಇಂದು ಹಿರೇಕೆರೂರಿನ ಕಚೇರಿಯಲ್ಲಿ ಹಿರೇಕೆರೂರು ಹಾಗೂ ರಟ್ಟಿಹಳ್ಳಿ ತಾಲೂಕುಗಳ ತಹಸಿಲ್ದಾರ್ ಮತ್ತು ತಾಲೂಕು ವೈದ್ಯಾಧಿಕಾರಿ ಹಾಗೂ ತಾಲೂಕಿನ ಎಲ್ಲ ವೈದ್ಯಾಧಿಕಾರಿಗಳ ಸಭೆ ನಡೆಸಿದರು.
ಈ ವೇಳೆ ಕೋವಿಡ್ 19ನ ಮೂರನೆ ಅಲೆ ಎದುರಿಸಲು ಹಿರೇಕೆರೂರು ಆರೋಗ್ಯ ಇಲಾಖೆ ಸಂಪೂರ್ಣ ಸಿದ್ಧವಾಗಿದ್ದು, ರೋಗಿಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಚಿಕಿತ್ಸೆಗೆ ಅವಶ್ಯವಿರುವ ಆಕ್ಸಿಜನ್ ವೆಂಟಿಲೇಟರ್ ಸೇರಿದಂತೆ ಎಲ್ಲ ರೀತಿಯ ಚಿಕಿತ್ಸಾ ಉಪಕರಣಗಳು ಹಾಗೂ ಔಷಧಿಗಳನ್ನು ವ್ಯವಸ್ಥಿತ ರೀತಿಯಲ್ಲಿ ಸಂಗ್ರಹಿಸಿಟ್ಟುಕೊಳ್ಳಲು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸೂಚನೆಯಂತೆ ನಾಳೆಯಿಂದ 15 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ಹಾಕಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಹಾಗೂ ಮಕ್ಕಳ ಪಾಲಕರಲ್ಲಿ ಮತ್ತು ಮಕ್ಕಳಲ್ಲಿ ಜಾಗೃತಿ ಮೂಡಿಸುವ ಅವಶ್ಯಕತೆ ಇದ್ದು, ಈ ನಿಟ್ಟಿನಲ್ಲಿ ಸೂಕ್ತ ರೀತಿಯಲ್ಲಿ ಕ್ರಮಕೈಗೊಳ್ಳುವಂತೆ ಆದೇಶಿಸಿದರು.
ಕೋವಿಡ್ 19ನ 3ನೇ ಅಲೆಯನ್ನು ತಪ್ಪಿಸಲು ಹಾಗೂ ಒಮಿಕ್ರಾನ್ ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಶಾಲಾ ಶಿಕ್ಷಕರು ಶಾಲೆಯ ಮಕ್ಕಳಲ್ಲಿ ಹಾಗೂ ಅವರ ಪಾಲಕರಲ್ಲಿ ಜಾಗೃತಿ ಮೂಡಿಸಲು ಕ್ರಮಗಳನ್ನು ಕೈಗೊಳ್ಳುವಂತೆ ಸಭೆಯಲ್ಲಿ ಹಾಜರಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಯವರಿಗೆ ಸೂಚಿಸಿದರು.
ಇದೇ ವೇಳೆ ಸಾರ್ವಜನಿಕರು ವೈದ್ಯರ ತಪಾಸಣೆ ಇಲ್ಲದೆ ಅಥವಾ ವೈದ್ಯರ ಚೀಟಿ ಇಲ್ಲದೆ ಮೆಡಿಕಲ್ ಶಾಪ್ ಗಳಲ್ಲಿ ಅನಧಿಕೃತವಾಗಿ ಔಷಧಿ ಪಡೆಯದೆ ವೈದ್ಯರಲ್ಲಿ ತಪಾಸಣೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುವಂತೆ ಸಾರ್ವಜನಿಕರಲ್ಲಿ ವಿನಂತಿಸಿದರು
ಸಭೆಯಲ್ಲಿ ಹಿರೇಕೆರೂರ ಮತ್ತು ರಟ್ಟೀಹಳ್ಳಿ ತಾಲ್ಲೂಕು ತಹಶೀಲ್ದಾರರು, ತಾಲ್ಲೂಕು ವೈದ್ಯಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd