Politics : ರಾಜ್ಯ ಸರ್ಕಾರದ ಅಭಿವೃದ್ಧಿಗಳನ್ನು ಬಿಚ್ಚಿಟ್ಟಿರುವ ರಾಜ್ಯಪಾಲರ ಭಾಷಣ : ಬಿಸಿಪಾ
ಬೆಂಗಳೂರು, ಫೆ.14: ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ಜೀ ರಾಜ್ಯ ವಿಧಾನ ಮಂಡಲದ ಉಭಯ ಸದನಗಳಲ್ಲಿ ತಮ್ಮ ಭಾಷಣದ ಮೂಲಕ ರಾಜ್ಯ ಸರ್ಕಾರದ ಅಭಿವೃದ್ಧಿ ಕಾರ್ಯಗಳನ್ನು ಬಿಚ್ಚಿಟ್ಟಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲರು ಹೇಳಿದ್ದಾರೆ.
ಕೃಷಿ, ಆರೋಗ್ಯ, ಶಿಕ್ಷಣ, ಸೇರಿದಂತೆ ಮತ್ತಿತರ ರಾಜ್ಯದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಒತ್ತು ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪಣತೊಟ್ಟು ಹಲವು ಅಭಿವೃದ್ಧಿ ಜನೋಪಯೋಗಿ ಕಾರ್ಯಕ್ರಮಗಳನ್ನು ರೂಪಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಬಿಸಿಪಾ ತಿಳಿಸಿದ್ದಾರೆ.