ಬೆಂಗಳೂರು : ಕೃಷಿ ಸಚಿವ ಬಿ.ಸಿ ಪಾಟೀಲ್ ಅವರಿಗೆ ಹೆಮ್ಮಾರಿ ಕೊರೊನಾ ಸೋಂಕಿರುವುದು ದೃಢವಾಗಿದ್ದು, ಅವರು ಬೇಗ ಗುಣಮುಖರಾಗಲಿ ಎಂದು ಸಚಿವ ಸುಧಾಕರ್ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸುಧಾಕರ್, ಸಂಪುಟದ ಸಹೋದ್ಯೋಗಿಗಳು, ನನ್ನ ಆತ್ಮೀಯರು ಹಾಗು ಕೃಷಿ ಸಚಿವರಾದ ಬಿ.ಸಿ. ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ ಎಂದು ತಿಳಿದು ಬಂದಿದೆ. ಅವರು ಬೇಗ ಗುಣ ಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
https://twitter.com/mla_sudhakar/status/1289416022542303232?s=20
ಇನ್ನು ತಮಗೆ ಕೊರೊನಾ ಸೋಂಕು ದೃಢಪಟ್ಟ ಬಗ್ಗೆ ಬಿ.ಸಿ ಪಾಟೀಲ್ ಅವರು ಟ್ವಿಟ್ಟರ್ ನಲ್ಲಿ ತಿಳಿಸಿದ್ದರು.”ಇದೀಗ ಬಂದ ವರದಿಯ ಪ್ರಕಾರ ನನಗೆ ಕೊರೊನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಬೆಂಗಳೂರಿನ ನನ್ನ ನಿವಾಸದಲ್ಲಿ ಹೋಂ ಕ್ವಾರಂಟೈನ್ ಆಗುತ್ತಿದ್ದೇನೆ. ಕೊಪ್ಪಳ ಜಿಲ್ಲೆಗೆ ಇತ್ತೀಚೆಗೆ ಭೇಟಿ ನೀಡಿದ ಸಂದರ್ಭದಲ್ಲಿ, ನನ್ನ ಜೊತೆ ಆಗಮಿಸಿದ ಐದು ಜನ ಸಿಬ್ಬಂದಿಗಳಿಗೂ ಕೊರೊನಾ ಪಾಸಿಟಿವ್ ಎಂದು ವರದಿ ಬಂದಿದೆ.
ಅಲ್ಲದೇ ಇತ್ತೀಚೆಗೆ ನನ್ನನ್ನು ಹಿರೇಕೆರೂರು ಹಾಗೂ ಕೊಪ್ಪಳ ಭಾಗದಲ್ಲಿ ಭೇಟಿಯಾದ ಪ್ರಥಮ ಮತ್ತು ದ್ವಿತೀಯ ಸಂಪರ್ಕಿತರು, ಯಾರಿಗಾದರೂ ಕೋವಿಡ್ ಲಕ್ಷಣ ಕಂಡುಬಂದಲ್ಲಿ ಕೂಡಲೇ ಪರೀಕ್ಷೆಗೆ ಒಳಗಾಗಿ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಕೋವಿಡ್ ವಿರುದ್ಧ ಗೆಲ್ಲುವ ವಿಶ್ವಾಸವಿದೆ, ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಹಾರೈಕೆ ಇರಲಿ” ಎಂದು ಟ್ವೀಟ್ ಮಾಡಿದ್ದರು.