ಹಾವೇರಿ : ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಬಿಜೆಪಿ ಸೇರ್ಪಡೆಯನ್ನು ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ವಾಗತಿಸಿದ್ದಾರೆ.
ಮದಗಮಾಸೂರು ಕೆರೆಗೆ ಬಾಗೀನ ಅರ್ಪಿಸಿದ ಬಳಿಕ ಮಾತನಾಡಿದ ಸಚಿವರು, ಅಣ್ಣಾಮಲೈ ಒಬ್ಬ ಒಳ್ಳೆಯ ಅಧಿಕಾರಿಯಾಗಿದ್ದವರು.ಒಳ್ಳೆಯ ಕೆಲಸ ಮಾಡಿದ್ದಾರೆ.ಅವರು ಬಿಜೆಪಿಗೆ ಬರುವುದನ್ನು ಆತ್ಮೀಯವಾಗಿ ಸ್ವಾಗತಿಸುವುದಾಗಿ ಹೇಳಿದರು.
ಮಾಜಿ ಐಪಿಎಸ್ ಅಧಿಕಾರಿ, ಕರ್ನಾಟಕದ ಸಿಂಗಂ ಎಂದೇ ಪ್ರಸಿದ್ದರಾಗಿದ್ದ ಕೆ. ಅಣ್ಣಾಮಲೈ ಅವರು ದೆಹಲಿಯ ಬಿಜೆಪಿ ಕಚೇರಿಯಲ್ಲಿ ಕಮಲ ಬಾವುಟ ಹಿಡಿದರು. ಬಿಜೆಪಿ ಶಾಲು ಹೊದಿಸಿ, ಸೇರ್ಪಡೆ ಆದೇಶ ನೀಡುವ ಮೂಲಕ ಮುರುಳೀಧರ್ ರಾವ್, ಅಣ್ಣಾಮಲೈ ಅವರನ್ನು ಬಿಜೆಪಿಗೆ ಅಧಿಕೃತವಾಗಿ ಸೇರಿಸಿಕೊಂಡರು. ಈ ಮೂಲಕ ತಮಿಳುನಾಡು ರಾಜಕೀಯಕ್ಕೆ ಸಿಂಗಂ ಅಧಿಕೃತವಾಗಿ ಎಂಟ್ರಿ ಕೊಟ್ಟಂತಾಗಿದೆ.








