ಆಸೀಸ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆ :ರಾಹುಲ್ ಗಿಲ್ಲ ಸ್ಥಾನ
ಅಡಿಲೇಡ್ : ಆಸೀಸ್ ವಿರುದ್ಧ ನಡೆಯಲಿರುವ ಚೊಚ್ಚಲ ಪಿಂಕ್ ಬಾಲ್ ಅಂಡ್ ಡೇ ನೈಟ್ ಪಂದ್ಯಕ್ಕೆ ಬಿಸಿಸಿಐ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಅನ್ನು ಪ್ರಕಟ ಮಾಡಿದೆ.
ವಿರಾಟ್ ಕೊಹ್ಲಿ ತಂಡವನ್ನು ಮುನ್ನಡೆಸಲಿದ್ದು, ಉತ್ತಮ ಲಯದಲ್ಲಿರುವ ಕೆ.ಎಲ್ ರಾಹುಲ್ ಅವರನ್ನು ಕೈ ಬಿಡಲಾಗಿದೆ. ಹೀಗಾಗಿ ಅಡಿಲೇಡ್ ಓವಲ್ನಲ್ಲಿ ನಡೆಯಲಿರುವ ಹಗಲು-ರಾತ್ರಿ ಪಂದ್ಯದಲ್ಲಿ ಪೃಥ್ವಿ ಶಾ ಹಾಗೂ ಮಯಂಕ್ ಅಗರವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ.
ಇನ್ನು ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ ಪೂಜಾರ, ನಾಯಕ ವಿರಾಟ್ ಕೊಹ್ಲಿ ಮತ್ತು ಉಪನಾಯಕ ಅಜಿಂಕ್ಯ ರಹಾನೆ ಬಲ ತುಂಬಲಿದ್ದಾರೆ. ಕೆಳ ಕ್ರಮಾಂಕದಲ್ಲಿ ಹನುಮ ವಿಹಾರಿಗೆ ಅವಕಾಶ ಕಲ್ಪಿಸಲಾಗಿದ್ದು, ವೃದ್ಧಿಮಾನ್ ಸಹಾ ವಿಕೆಟ್ ಕೀಪಿಂಗ್ ಜವಾಬ್ದಾರಿಯನ್ನು ನಿರ್ವಹಿಸಲಿದ್ದಾರೆ.
ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಉಮೇಶ್ ಯಾದವ್ ವೇಗದ ಅಸ್ತ್ರವಾಗಲಿದ್ದರೇ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಇವರಿಗೆ ಸಾಥ್ ನೀಡಲಿದ್ದಾರೆ.
ಇನ್ನುಳಿದಂತೆ ರಿಷಭ್ ಪಂತ್, ಕುಲ್ದೀಪ್ ಯಾದವ್, ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಅವಕಾಶ ವಂಚಿತವಾಗಿದ್ದಾರೆ.
ಟೀಮ್ ಇಂಡಿಯಾ ಆಡುವ ಬಳಗ ಹೀಗೆದೆ:
ವಿರಾಟ್ ಕೊಹ್ಲಿ (ನಾಯಕ), ಮಯಂಕ್ ಅಗರವಾಲ್, ಪೃಥ್ವಿ ಶಾ, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಉಮೇಶ್ ಯಾದವ್, ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ತಂಡದಲ್ಲಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









