ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ ಈ ಬಾರಿ ದೇಶದಲ್ಲಿ ನಡೆಯಲಿದ್ದು, ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಬಿಸಿಸಿಐ ಸಂಪೂರ್ಣ ವೇಳಾಪಟ್ಟಿ ಪ್ರಕಟಿಸಿದೆ. ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಸಿಸಿಐ ಏಪ್ರಿಲ್ 7ರವರೆಗಿನ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈಗ ಲೋಕಸಭಾ ಚುನಾವಣಾ ದಿನಾಂಕ ಪ್ರಕಟವಾದ ನಂತರ ಈಗ ಇನ್ನುಳಿದ ಪಂದ್ಯಗಳ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಕ್ವಾಲಿಫೈಯರ್, ಎಲಿಮಿನೇಟರ್, ಫೈನಲ್ ಸೇರಿ ಒಟ್ಟು 74 ಪಂದ್ಯಗಳು ನಡೆಯಲಿವೆ. ಮೇ 21, 22 ರಂದು ಗುಜರಾತಿನ ಅಹಮದಾಬಾದ್ನಲ್ಲಿ ಕ್ವಾಲಿಫೈಯರ್ 1 ಮತ್ತು ಎಲಿಮಿನೇಟರ್ ಪಂದ್ಯ ನಡೆಯಲಿವೆ. ಚೆನ್ನೈನಲ್ಲಿ ಮೇ 24 ರಂದು ಕ್ವಾಲಿಫೈಯರ್ 2 ನಡೆದರೆ ಮೇ 26 ರಂದು ಫೈನಲ್ ನಡೆಯಲಿದೆ.