ಬಿಸಿಸಿಐ ತನ್ನ ಕೇಂದ್ರ ಒಪ್ಪಂದ ಪಟ್ಟಿ ಬಿಡುಗಡೆ ಮಾಡಿದ್ದು, ಹಲವು ಯುವ ಆಟಗಾರರು ಮೊದಲ ಬಾರಿಗೆ ಸ್ಥಾನ ಪಡೆದಿದ್ದರೆ, ಹಲವರಿಗೆ ಕೊಕ್ ಸಿಕ್ಕಿದೆ.
ಕನ್ನಡಿಗ ಪ್ರಸಿದ್ಧ್ ಕೃಷ್ಣ, ರಿಂಕು ಸಿಂಗ್, ತಿಲಕ್ ವರ್ಮಾ, ಇಂಗ್ಲೆಂಡ್ ಟೆಸ್ಟ್ ಪಂದ್ಯದಲ್ಲಿ ಆಡುತ್ತಿರುವ ರಜತ್ ಪಾಟಿದಾರ್ ಸೇರಿದಂತೆ 11 ಜನ ಯುವ ಆಟಗಾರರು ಸ್ಥಾನ ಪಡೆದಿದ್ದಾರೆ. ಆದರೆ, ಮಧ್ಯಮ ಕ್ರಮಾಂದಕ ಅನುಭವಿ ಆಟಗಾರ ಶ್ರೇಯಸ್ ಅಯ್ಯರ್ ಹಾಗೂ ಯುವ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಇಶಾನ್ ಕಿಶನ್, ದೀಪಕ್ ಹೂಡ ಕೇಂದ್ರ ಗುತ್ತಿಗೆಯಿಂದ ಹೊರಗೆ ಉಳಿದಿರುವುದು ಆಶ್ಚರ್ಯ ಮೂಡಿಸಿದೆ.
ಚುಟುಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ರಿಂಕು ಸಿಂಗ್ ಮೊದಲ ಬಾರಿಗೆ ಪಟ್ಟಿಲ್ಲಿ ಸ್ಥಾನ ಪಡೆದಿದ್ದಾರೆ. ರಿಂಕು ಸಿಂಗ್ ಸಿ ಗ್ರೇಡ್ ಒಪ್ಪಂದದಲ್ಲಿ ಸ್ಥಾನ ಪಡೆದಿದ್ದಾರೆ. ರಜತ್ ಪಾಟಿದಾರ್, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ಪ್ರಸಿದ್ಧ್ ಕೃಷ್ಣ ಕೂಡ ಸಿ ಗ್ರೇಡ್ನಲ್ಲಿ ಸ್ಥಾನ ಪಡೆದಿದ್ದಾರೆ.
ಬಾರಿಗೆ ಸ್ಥಾನ ಪಡೆದ 11 ಆಟಗಾರರ ಪೈಕಿ ಯಶಸ್ವಿ ಜೈಸ್ವಾಲ್ ಬಿ ಗ್ರೇಡ್ಗೆ ಸೇರ್ಪಡೆಯಾಗಿದ್ದಾರೆ.
ಹಿಂದೆ ಚೇತೇಶ್ವರ್ ಪೂಜಾರ, ಶ್ರೇಯಸ್ ಅಯ್ಯರ್, ಉಮೇಶ್ ಯಾದವ್, ಶಿಖರ್ ಧವನ್, ಇಶಾನ್ ಕಿಶನ್, ದೀಪಕ್ ಹೂಡಾ, ಯುಜ್ವೇಂದ್ರ ಚಾಹಲ್ ವಿವಿದ ಗ್ರೇಡ್ ಗಳಲ್ಲಿ ಸ್ಥಾನ ಪಡೆದಿದ್ದರು. ಆದರೆ ಸದ್ಯ ಈ ಆಟಗಾರರನ್ನು ಒಪ್ಪಂದದಿಂದ ಹೊರಗೆ ಹಾಕಲಾಗಿದೆ.