ADVERTISEMENT
Sunday, July 5, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಐಪಿಎಲ್ 2020 – ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಅನುಮತಿ ಪತ್ರ ರವಾನೆ

admin by admin
August 12, 2020
in Newsbeat, Sports, ಕ್ರೀಡೆ
Share on FacebookShare on TwitterShare on WhatsappShare on Telegram

ಐಪಿಎಲ್ 2020 – ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಬಿಸಿಸಿಐ ಅನುಮತಿ ಪತ್ರ ರವಾನೆ

ಸೆಪ್ಟಂಬರ್ 19ರಿಂದ ನವೆಂಬರ್ 10ರವರೆಗೆ ಯುಎಇನಲ್ಲಿ 13ನೇ ಆವೃತ್ತಿಯ ಐಪಿಎಲ್ ಟೂರ್ನಿ ನಡೆಯಲಿದೆ. ಈಗಾಗಲೇ ಬಿಸಿಸಿಐಗೆ ಭಾರತ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಬಿಸಿಸಿಐ ಐಪಿಎಲ್ ಟೂರ್ನಿಯ ಕುರಿತಂತೆ ಎಮಿರೇಟ್ಸ್ ಕ್ರಿಕೆಟ್ ಮಂಡಳಿಗೆ ಅನುಮತಿ ಪತ್ರವನ್ನು ರವಾನಿಸಿದೆ.
ಈಗಾಗಲೇ ಐಪಿಎಲ್ ಮುಖ್ಯಸ್ಥ ಬ್ರಿಜೇಶ್ ಪಟೇಲ್ ಕೇಂದ್ರ ಸರ್ಕಾರ ಅನುಮತಿ ನೀಡಿರುವುದನ್ನು ಸ್ಪಷ್ಟಪಡಿಸಿದ್ದಾರೆ. ಹಾಗೇ ಕೋವಿಡ್-19ನಿಂದಾಗಿ ಐಪಿಎಲ್ ಟೂರ್ನಿ ಯುಎಇಗೆ ಶಿಫ್ಟ್ ಆಗಿದೆ.
ಐಪಿಎಲ್ ಟೂರ್ನಿಯ ಆತಿಥ್ಯ ವಹಿಸುವುದು ನಮಗೆ ಹೆಮ್ಮೆಯನ್ನುಂಟು ಮಾಡಿದೆ. ಎಲ್ಲಾ ರೀತಿಯ ಸವಲತ್ತುಗಳನ್ನು ನಾವು ಹೊಂದಿದ್ದೇವೆ ಎಂದು ಎಮಿರೇಟ್ಸ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶೇಕ್ ನಹಾಯಾನ್ ಮಬಾರಕ್ ಆಲ್ ನಹಾಯನ್ ಹೇಳಿದ್ದಾರೆ.
ಯುಎಇ ನಲ್ಲಿ ಕೋವಿಡ್-19 ಪರಿಸ್ಥಿತಿ ಹತೋಟಿಗೆ ಬಂದಿದೆ. ಹೀಗಾಗಿ ಬಿಸಿಸಿಐ ಯುಎಇನಲ್ಲಿ ಐಪಿಎಲ್ ಟೂರ್ನಿಯನ್ನು ಆಯೋಜಿಸಲು ಮುಂದೆ ಬಂದಿದೆ. ಇದರಲ್ಲಿ ಸಂಶಯವೇ ಇಲ್ಲ. ಯುಎಇನಲ್ಲಿ ಹೈ ಪ್ರೊಫೈಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದೆ. ಟೂರ್ನಿಯ ಯಶಸ್ಸಿಗೆ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಿದ್ದೇವೆ. ಭಾರತ ಮತ್ತು ವಿಶ್ವದ ಎಲ್ಲಾ ಕ್ರಿಕೆಟ್ ಅಭಿಮಾನಿಗಳು ಈ ಟೂರ್ನಿಯನ್ನು ಕಾತರದಿಂದ ಕಾಯುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಈ ಬಾರಿಯ ಐಪಿಎಲ್ ಟೂರ್ನಿ ಯುಎಇನ ಮೂರು ಮೈದಾನಗಳಲ್ಲಿ ನಡೆಯಲಿದೆ. ಅಬುದಾಬಿ, ದುಬೈ ಮತ್ತು ಶಾರ್ಜಾದಲ್ಲಿ ಐಪಿಎಲ್ ಪಂದ್ಯಗಳು ನಡೆಯಲಿವೆ. ಐಪಿಎಲ್‍ನ ಎಂಟು ತಂಡಗಳು ಆಗಸ್ಟ್ 20ರನಂತರ ಯುಎಇಗೆ ಪ್ರಯಾಣ ಬೆಳೆಸಲಿವೆ. ಆಟಗಾರರು ಜೈವಿಕ ಸುರಕ್ಷತೆಗೆ ಹೋಗುವ ಮುನ್ನ ಆರು ದಿನಗಳ ಕಾಲ ಐಸೋಲೇಷನ್‍ನಲ್ಲಿ ಇರಲಿದ್ದಾರೆ. ಟೂರ್ನಿಗೆ ಬಿಸಿಸಿಐ, ಐಪಿಎಲ್, ಯುಎಇ ಸರ್ಕಾರ, ಆರೋಗ್ಯ ಇಲಾಖೆ ಟೂರ್ನಿಯ ಮೇಲೆ ನಿಗಾ ವಹಿಸಲಿದೆ.
ಅಂದ ಹಾಗೇ ಐಪಿಎಲ್ ಟೂರ್ನಿ ಯುಎಇನಲ್ಲಿ ನಡೆಯುತ್ತಿರುವುದು ಇದು ಎರಡನೇ ಬಾರಿ. ಈ ಹಿಂದೆ 2014ರಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಯುಎಇನಲ್ಲಿ ಆಯೋಜನೆ ಮಾಡಲಾಗಿತ್ತು.

Related posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

July 5, 2026
ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

July 5, 2026
Tags: #Board of Control for Cricket in India#delli capiatalbccicskecbIPLIPL 2020kkrmumbai indianspunjab kings 11RCBsun risers hydrabadUAE
ShareTweetSendShare
Join us on:

Related Posts

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

ಹೊಂದಾಣಿಕೆ ರಾಜಕೀಯದ ಗುಟ್ಟು ರಟ್ಟಾಗುವ ಭೀತಿ? ಅಡ್ಡ ಮತದಾನ ಮಾಡಿದವರ ವಿರುದ್ಧ ಮೌನಕ್ಕೆ ಶರಣಾದ ಬಿಜೆಪಿ ನಾಯಕರು – ಅಡ್ಡ ಮತದಾನ ಪತ್ತೆಯಾದರೂ ಕೈಕಟ್ಟಿ ಕುಳಿತ ಬಿಜೆಪಿ ಹೈಕಮಾಂಡ್

by Shwetha
July 5, 2026
0

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ ಸಂಭವಿಸಿದ ಅಡ್ಡ ಮತದಾನದ ಪ್ರಹಸನ ಈಗ ಹೈಕಮಾಂಡ್ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಪಕ್ಷದ್ರೋಹಿಗಳು ಯಾರು ಎಂಬುದು ಸಾಕ್ಷಿ ಸಮೇತ ಸಾಬೀತಾಗಿದ್ದರೂ, ಅವರ...

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

ರಾಮಮಂದಿರ ದೇಣಿಗೆ ಪ್ರಕರಣ; ಹಣ ವಾಪಸ್ ಕೇಳಿದ ಮಾಜಿ ಸಿಎಂ ದಿಗ್ವಿಜಯ್ ಸಿಂಗ್

by Shwetha
July 5, 2026
0

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿಗ್ವಿಜಯ್ ಸಿಂಗ್ ಮಹತ್ವದ ಹೇಳಿಕೆ ನೀಡಿದ್ದಾರೆ.ಅವರು, ನಾನು ಅಯೋಧ್ಯೆಯಲ್ಲಿ ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿದ್ದೇನೆ. ನಾನು ನೀಡಿದ ₹1.11 ಲಕ್ಷ...

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

ಭಾರತದ E20 ಪೆಟ್ರೋಲ್‌ಗೆ ಭೂತಾನ್ ನಿರಾಕರಣೆ; ಸಾಮಾನ್ಯ ಪೆಟ್ರೋಲ್‌ಗೆ ಬೇಡಿಕೆ

by Shwetha
July 5, 2026
0

ಭಾರತದ ತೈಲ ಮಾರುಕಟ್ಟೆ ಕಂಪನಿಗಳು ಪೂರೈಸುತ್ತಿರುವ E20 (20% ಎಥೆನಾಲ್ ಮಿಶ್ರಿತ) ಪೆಟ್ರೋಲ್ ಅನ್ನು ಭೂತಾನ್ ಸ್ವೀಕರಿಸಲು ನಿರಾಕರಿಸಿದ್ದು, ಅದರ ಬದಲಿಗೆ ಸಾಮಾನ್ಯ (ಸ್ಟ್ಯಾಂಡರ್ಡ್) ಪೆಟ್ರೋಲ್ ಪೂರೈಸುವಂತೆ...

ನೀಟ್ ಹಗರಣದ ಹಿಂದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸಂಚು: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ

SIRಗೆ ಸರ್ಕಾರ ಯಾರಿಗೂ ಒತ್ತಾಯ ಮಾಡುತ್ತಿಲ್ಲ: ಗೃಹ ಸಚಿವ ಪ್ರಿಯಾಂಕ್ ಖರ್ಗೆ

by Shwetha
July 5, 2026
0

SIR ಪ್ರಕ್ರಿಯೆಯಲ್ಲಿ ಲೋಪಗಳಾಗುತ್ತಿವೆ ಎಂಬ ವಿಪಕ್ಷಗಳ ಆರೋಪಕ್ಕೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಮೀರಿ ಯಾರೂ ಏನನ್ನೂ ಮಾಡಲು...

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ರಾಜ್ಯದಲ್ಲಿ ಇಂದು ಭಾರೀ ಮಳೆ ಸಾಧ್ಯತೆ; ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

by Shwetha
July 5, 2026
0

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram