ರಾಹುಲ್ ನಾಯಕತ್ವ ಭವಿಷ್ಯಕ್ಕೆ ಬಿಸಿಸಿಐ ಬೆಂಬಲ

1 min read
BCCI saaksha tv

ರಾಹುಲ್ ನಾಯಕತ್ವ ಭವಿಷ್ಯಕ್ಕೆ ಬಿಸಿಸಿಐ ಬೆಂಬಲ BCCI saaksha tv

ರೋಹಿತ್​ ಅಲಭ್ಯತೆ ಹಿನ್ನೆಲೆಯಲ್ಲಿ ರಾಹುಲ್​ ಮೇಲೆ ನಾವು ವಿಶ್ವಾಸ ಹೊಂದಿದ್ದು, ಅವರ ನಾಯಕತ್ವ ಭವಿಷ್ಯಕ್ಕೆ ಬೆಂಬಲ ನೀಡುತ್ತೇವೆ ಎಂದು ಭಾರತ ಕ್ರಿಕೆಟ್ ತಂಡದ ಆಯ್ಕೆ ಸಮಿತಿ ಅಧ್ಯಕ್ಷ ಚೇತನ್ ಶರ್ಮಾ ಹೇಳಿದ್ದಾರೆ.

ಟೀಂ ಇಂಡಿಯಾದ ಸೀಮಿತ ಓವರ್ ಗಳ ನಾಯಕ ರೋಹಿತ್ ಶರ್ಮಾ ಗಾಯಗೊಂಡಿದ್ದಾರೆ.

ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ದೂರ ಉಳಿದಿದ್ದಾರೆ.

ಹೀಗಾಗಿ ಕನ್ನಡಿಗ, ಕೆ.ಎಲ್ ರಾಹುಲ್ ಅವರಿಗೆ ಟೀಂ ಇಂಡಿಯಾದ ನಾಯಕತ್ವವನ್ನು ನೀಡಲಾಗಿದೆ.

ಇತ್ತಿಚೆಗಷ್ಟೆ ರಾಹುಲ್ ಅವರನ್ನು ಸೀಮಿತ ಓವರ್ ಗಳ ಕ್ರಿಕೆಟ್ ತಂಡಕ್ಕೆ ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿತ್ತು.

ಇದಾದ ಬಳಿಕ ರೋಹಿತ್ ಅನುಪಸ್ಥಿತಿಯಲ್ಲಿ ರಾಹುಲ್ ಅವರನ್ನು ಟೆಸ್ಟ್ ತಂಡದ ಉಪನಾಯಕನ ಪಟ್ಟದಲ್ಲಿ ಕೂರಿಸಲಾಗಿತ್ತು.

BCCI saaksha tv

ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗೆ ಅವರನ್ನು ಕ್ಯಾಪ್ಟನ್ ಆಗಿ ಆಯ್ಕೆ ಮಾಡಲಾಗಿದೆ.

ಈ ಬಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿರುವ ಚೇತನ್ ಶರ್ಮಾ, ಕೆಎಲ್ ರಾಹುಲ್ ಅವರತ್ತ ಆಯ್ಕೆಗಾರರು ದೃಷ್ಟಿ ನೆಟ್ಟಿದ್ದು, ಅವರು ಮೂರು ಮಾದರಿ ಆಟಗಾರರಾಗಿದ್ದಾರೆ.

ನಾಯಕತ್ವದ ಉತ್ತಮ ಅನುಭವ ಹೊಂದಿದ್ದು, ತಮ್ಮ ಸಾಮರ್ಥ್ಯ ಸಾಬೀತು ಪಡಿಸಿದ್ದಾರೆ. ರೋಹಿತ್​ ಅಲಭ್ಯತೆ ಹಿನ್ನೆಲೆಯಲ್ಲಿ ರಾಹುಲ್​ ಮೇಲೆ ನಾವು ವಿಶ್ವಾಸ ಹೊಂದಿದ್ದು, ಅವರ ನಾಯಕತ್ವ ಭವಿಷ್ಯಕ್ಕೆ ಬೆಂಬಲ ನೀಡುತ್ತೇವೆ ಎಂದು ತಿಳಿಸಿದ್ದಾರೆ.

ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯು ಜನವರಿ 19ರಂದು ಪಾರ್ಲ್‌ನ ಬೋಲ್ಯಾಂಡ್ ಪಾರ್ಕ್‌ನಲ್ಲಿ ಆರಂಭವಾಗಲಿದೆ. ಎರಡನೇ ಏಕದಿನ ಪಂದ್ಯ ಇದೇ ಮೈದಾನದಲ್ಲಿ ಜನವರಿ 21ರಂದು ಮತ್ತು ಮೂರನೇ ಏಕದಿನ ಪಂದ್ಯ ಜನವರಿ 23ರಂದು ಕೇಪ್​​ಟೌನ್‌ನಲ್ಲಿ ನಡೆಯಲಿದೆ.

Leave a Reply

Your email address will not be published.

YOU MUST READ

Copyright © All rights reserved | SaakshaTV | JustInit DigiTech Pvt Ltd