Beḷagāvi ಕರ್ನಾಟಕ-ಮಹಾರಾಷ್ಟ್ರದಲ್ಲಿ ಗಡಿ ವಿಷಯವಾಗಿ ಮತ್ತೆ ಕಿಡಿ ಹೊತ್ತು ಕೊಂಡಿದು ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನೇತೃತ್ವದಲ್ಲಿ ಸುಮಾರು 450ಕ್ಕೂ ಅಧಿಕ ಪೊಲೀಸರನ್ನು ಕರ್ತವ್ಯಕ್ಕೆ ಆಯೋಜಿಸಲಾಗಿದೆ .
ರಾಷ್ಟ್ರೀಯ ಹೆದ್ದಾರಿ 4ರ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ಪೋಸ್ಟ್ ಬಳಿ ಬಂದೋಬಸ್ತ ಅನ್ನು ಹೆಚ್ಚಿಸಲಾಗಿದ್ದು
ಕೊಲ್ಲಾಪುರದ ಶಿವಸೇನೆ ಕಾರ್ಯಕರ್ತರು ಗಡಿಗೆ ನುಗ್ಗಿ ಗಲಾಟೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆ ಪ್ರದೇಶದ ಗಡಿಯಲ್ಲಿ ಭದ್ರತೆಯನ್ನು ಮತ್ತಷ್ಟು ಬಿಗಿಗೋಳಿಸಲಾಗಿದೆ.
ಕರ್ನಾಟಕ ಬಸ್ಗೆ ಮಸಿ ಬಳಿದ ಐವರ ಬಂಧನ: ಕರ್ನಾಟಕ ರಾಜ್ಯ ಸಾರಿಗೆಯ 10ಕ್ಕೂ ಹೆಚ್ಚು ಬಸ್ಗಳು ಮಹಾರಾಷ್ಟ್ರದ ಪುಣೆಯ ಬಸ್ ನಿಲ್ದಾಣದಲ್ಲಿ ನಿಂತಿದ್ದ ವೇಳೆ ಶಿವಸೇನೆ ಕೆಲ ಕಾರ್ಯಕರ್ತರು ಬಸ್ಸಗಳ ಮೇಲೆ ‘ಜೈ ಮಹಾರಾಷ್ಟ್ರ’ ಎಂದು ಕಪ್ಪು ಹಾಗೂ ಕೇಸರಿ ಬಣ್ಣದಿಂದ ಬರೆದಿದ್ದಾರೆ, ಈ ಕೃತ್ಯ ಎಸಗಿದ 5 ಮಂದಿಯನ್ನು ಪೊಲೀಸರು ಬಂದಿಸಿದ್ದಾರೆ . ಗಡಿ ಸಂಘರ್ಷದ ಹಿನ್ನೆಲೆಯಲ್ಲಿ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರು ಮಸಿ ಬಳಿದಿದ್ದಾರೆ.
ವಿಷಯ ತಿಳಿದ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ ಸೇರಿದಂತೆ ಹಲವಾರು ಕನ್ನಡ ಪರ ಹೋರಾಟಗಾರರು ಬೆಳಗಾವಿಯತ್ತ ಧಾವಿಸುತ್ತಿರುವುದನ್ನು ತಿಳಿದ ಪೊಲೀಸರು ಪರೀಸ್ಥಿತಿ ಯನ್ನು ನಿಯಂತ್ರಿಸಲು ಹಿರೇಬಾಗೇವಾಡಿಯ ಟೋಲ್ಗೇಟ್ನಲ್ಲೇ ಹೋರಾಟಗಾರರನ್ನು ತಡೆದಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಹೋರಾಟಗಾರರು ಆಯತಪ್ಪಿ ನೆಲಕ್ಕೆ ಬಿದ್ದಿದ್ದಾರೆ .
ಇನ್ನೂ ಕೆಲವು ಹೋರಾಟಗಾರರು ರಸ್ತೆ ಮೇಲೆ ಬಿದ್ದು ಉರುಳಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಬ್ಬ ಹೋರಾಟಗಾರ ಬಸ್ಸಿನ ಕೆಳಭಾಗ ಹೋಗಿ ಚಾಸಿ ಹಿಡಿದು ಬಸ್ಸಿಗೆ ಜೋತು ಬಿದ್ದ ಘಟನೆ ನಡೆದಿದೆ.
ಹೋರಾಟಗಾರನನ್ನ ಹೊರಗೆ ತರಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ . ಕೆಲ ಹೋರಾಟಗಾರರು ಬಸ್ನ ಕಿಟಕಿಯಿಂದ ಹೊರಗೆ ಜಿಗಿದಿದ್ದರು. ಕೊನೆಗೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದು ಬೇರೆ ಕಡೆ ಕರೆದುಕೊಂಡು ಹೋಗಲು ಹರ ಸಾಹಸ ಪಡ ಬೇಕಾಯಿತು.
ಗಡಿ ವಿಚಾರ: ಬುಧವಾರದಿಂದ ಲೋಕಸಭಾ ಅಧಿವೇಶನ ಆರಂಭವಾಗಲಿದ್ದು, ಬೆಳಗಾವಿ ಗಡಿ ವಿಚಾರ ಸಂಸತ್ತಿನಲ್ಲಿ ಪ್ರಸ್ತಾಪವಾಗಲಿದೆಯೇ ಎಂಬ ಕುತೂಹಲ ಉಂಟಾಗಿದೆ.
ಮಹಾರಾಷ್ಟ್ರದ ಶಿವಸೇನೆ ಸಂಸದರು ಬೆಳಗಾವಿ ಗಡಿ ವಿಚಾರದ ಬಗ್ಗೆ ಧ್ವನಿ ಎತ್ತಲು ತಯಾರಾಗಿದ್ದಾರೆ. ಆದರೆ, ಈ ಬಗ್ಗೆ ಕರ್ನಾಟಕದ ಸಂಸದರು ಈವರೆಗೂ ತುಟಿಬಿಚ್ಚಿಲ್ಲ . ಶಿವಸೇನೆ ನಾಯಕ ಬೆಳಗಾವಿ ಗಡಿ ವಿವಾದ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಹಾಗೂ ಸಂಸದರು ಕೇಂದ್ರ ಗೃಹ ಸಚಿವ ಅಮಿತ ಶಾ ಅವರೊಂದಿಗೆ ಚರ್ಚೆ ನಡೆಸಲು ತೀರ್ಮಾನಿಸಿದ್ದರೆ ಎಂದು ತಿಳಿದು ಬಂದಿದೆ,